ಮಂಗಳೂರು, ಫೆ 13(SM): ಅಕ್ರಮವಾಗಿ ಮರಳು ಸಾಗಿಸುತ್ತಿದ್ದ 04 ಲಾರಿಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಕಡೆಗಳಲ್ಲಿ ವಾಹನ ತಪಾಸಣೆ ಮಾಡುತ್ತಿರುವ ಸಮಯ ಕೇರಳಕ್ಕೆ ಅಕ್ರಮವಾಗಿ ಮರಳು ಸಾಗಾಟ ನಡೆಸುತ್ತಿದ್ದ 4 ಲಾರಿಗಳನ್ನು ವಶಕ್ಕೆ ಪಡೆಯಲಾಗಿದೆ.
ಬಿ.ಸಿ. ರೋಡ್ ಕಡೆಯಿಂದ ಪಡೀಲ್ ಮಾರ್ಗವಾಗಿ ಕೇರಳ ಕಡೆಗೆ ತೆರಳುತ್ತಿದ್ದ ಆಸ್ಟಿನ್ ಮಿರಾಂದ ಮಾಲಕತ್ವದ ಟಿಪ್ಪರ್ ಲಾರಿ, ಹಸನಬ್ಬ ಮಾಲಕತ್ವದ ಟಿಪ್ಪರ್ ಲಾರಿ, ಅಬ್ದುಲ್ ರೆಹಮಾನ್ ಮಾಲಕತ್ವದ ಲಾರಿ ಮತ್ತು ಹರೀಶ್ ಮಾಲಕತ್ವದ ಲಾರಿಗಳಲ್ಲಿ ಅಕ್ರಮವಾಗಿ ಮರಳು ಸಾಗಾಟ ನಡೆಸುತ್ತಿರುವುದು ಪತ್ತೆಯಾಗಿದೆ. ಯಾವುದೇ ಪರವಾಣಿಗೆ ಇಲ್ಲದೆ ಕೇರಳ ರಾಜ್ಯಕ್ಕೆ ಅಕ್ರಮವಾಗಿ ಮರಳು ಸಾಗಾಟ ನಡೆಸಲಾಗುತ್ತಿತ್ತು. ಈ ವೇಳೆ ಕಾರ್ಯ ಪ್ರವೃತರಾದ ಪೊಲೀಸರು ಸುಮಾರು ೩೬ ಲಕ್ಷ ರೂ. ಮೌಲ್ಯದ ಸೊತ್ತುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಕಂಕನಾಡಿ ನಗರ ಪೊಲೀಸ್ ಠಾಣಾ ನಿರೀಕ್ಷಕ ಅಶೋಕ್ ಪಿ. ಹಾಗೂ ಪಿ.ಎಸ್.ಐ. ಪ್ರದೀಪ್ ಟಿ. ಆರ್. ಮತ್ತು ಸಿಸಿಬಿ ಘಟಕದ ಪಿ.ಎಸ್.ಐ. ಕಬ್ಬಾಳ್ ರಾಜ್ ಮತ್ತು ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.