ಬಂಟ್ವಾಳ,ಅ 10 (DaijiworldNews/MS): ನೇತ್ರಾವತಿ ನದಿಯಲ್ಲಿ ಅಪರಿಚಿತ ಯುವತಿಯ ಮೃತದೇಹ ತೇಲುತ್ತಿರುವ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಸರಪಾಡಿ ಗ್ರಾಮದ ಎಸ್ ಇ ಝೆಡ್ ನೀರಿನ ಸ್ಥಾವರದ ಬಳಿ ನೇತ್ರಾವತಿ ನದಿಯಲ್ಲಿ ಮೃತದೇಹದ ತೇಲುತ್ತಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ನೀರಿಗೆ ಬಿದ್ದು ಸುಮಾರು ಮೂರು ದಿನಗಳು ಕಳೆದಿರಬಹುದು ಎಂಬ ಶಂಕೆ ಮೇಲ್ನೋಟಕ್ಕೆ ಕಂಡುಬರುತ್ತಿದೆ.
ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.