ಕಾಪು, ಅ 12 (DaijiworldNews/DB): ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ಕುಸಿದು ಬಿದ್ದು ಸಾವನ್ನಪ್ಪಿದ ಘಟನೆ ಕಾಪುವಿನಲ್ಲಿ ನಡೆದಿದೆ.
ಮೂಡುಬೆಳ್ಳೆಯ ಕಟ್ಟಿಂಗೇರಿ ನಿವಾಸಿ ಎಡ್ವರ್ಡ್ ಡಿಸೋಜ (67)ಮೃತಪಟ್ಟವರು.
ಇನ್ನಂಜೆಯ ಸಹೋದರನ ಮನೆಯ ಸ್ನಾನಗೃಹದಲ್ಲಿ ಅವರು ಅಸ್ವಸ್ಥರಾಗಿ ಕುಸಿದು ಬಿದ್ದಿದ್ದಾರೆ. ಕೂಡಲೇ ಉಡುಪಿ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಅಲ್ಲಿ ವೈದ್ಯರು ಅವರು ಮೃತಪಟ್ಟಿರುವುದಾಗಿ ತಿಳಿಸಿದರು. ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.