ಬಂಟ್ವಾಳ, ಅ 14 (DaijiworldNews/SM): ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಅವರ ಕಾರಿಗೆ ಅಡ್ಡಗಟ್ಟಿ ಜೀವಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಬಂಟ್ವಾಳ ಪೋಲೀಸರು ಬಂಧಿಸಿದ್ದಾರೆ.
ಮಂಗಳೂರು ಪಳ್ನೀರು ನಿವಾಸಿ ರಿಯಾಜ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.
ಗುರುವಾರ ರಾತ್ರಿ ಮಂಗಳೂರು ನಗರ ಹೊರವಲಯದ ಫರಂಗಿಪೇಟೆ ಎಂಬಲ್ಲಿ ಘಟನೆ ನಡೆದಿರುವ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು.
ಈ ಹಿನ್ನೆಲೆಯಲ್ಲಿ ತನಿಖೆ ಆರಂಭಿಸಿದ ಬಂಟ್ವಾಳ ಪೊಲೀಸರು ಆರೋಪಿ ಚಾಲಕ ಹಾಗೂ ಸ್ಕಾರ್ಫಿಯೋ ವಾಹನವನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಘಟನೆ ಕುರಿತು ವಿವರಿಸಿದ ಅವರು ಆರೋಪಿ ವಿರುದ್ದ ಈವರೆಗೆ ಯಾವುದೇ ಕ್ರಿಮಿನಲ್ ಪ್ರಕರಣಗಳು ದಾಖಲಾಗಿಲ್ಲ. ಹಾಗೂ ವಾಹನದಲ್ಲಿ ಯಾವುದೇ ಮಾರಕಾಯುಧಗಳು ಪತ್ತೆಯಾಗಿಲ್ಲ ಎಂದು ತಿಳಿಸಿದರು.
ಪ್ರಾಥಮಿಕ ತನಿಖೆಯಲ್ಲಿ ವಾಹನ ಓವರ್ ಟೇಕ್ ಮಾಡುವ ಭರದಲ್ಲಿ ಘಟನೆ ನಡೆದಿರುವ ಸಾಧ್ಯತೆ ಬಗ್ಗೆ ಅವರು ಸಂಶಯ ವ್ಯಕ್ತಪಡಿಸಿದ್ದು ಪೂರ್ಣ ತನಿಖೆಯ ಬಳಿಕ ಹೆಚ್ಚಿನ ವಿವರಗಳನ್ನು ತಿಳಿಸಲಾಗುತ್ತದೆ ಎಂದು ಅವರು ಹೇಳಿದರು.
ಎಡಿಷನಲ್ ಎಸ್.ಪಿ.ಕುಮಾರ್ ಚಂದ್ರ, ಬಂಟ್ವಾಳ ಗ್ರಾಮಾಂತರ ಪೋಲಿಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್ ಎಸ್ಐ. ಹರೀಶ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿತ್ತು.