ಬಂಟ್ವಾಳ, ಅ 15 (DaijiworldNews/DB): ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ ಕಾರ್ಯಕ್ರಮದನ್ವಯ ಬಂಟ್ವಾಳ ತಾಲೂಕು ತಹಶೀಲ್ದಾರರ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಬಂಟ್ವಾಳ ತಾಲೂಕಿನ ಕುಕ್ಕಿಪಾಡಿ ಗ್ರಾಮ ಪಂಚಾಯತ್ನ ಸಭಾಂಗಣದಲ್ಲಿ ಶನಿವಾರ ನಡೆಯಿತು.
ಬಂಟ್ವಾಳ ತಹಶೀಲ್ದಾರ್ ಸ್ಮಿತಾ ರಾಮು ಅವರು ಗ್ರಾಮ ವಾಸ್ತವ್ಯವನ್ನು ಉದ್ಘಾಟಿಸಿ ಮಾತನಾಡಿ, ಸರ್ಕಾರವೇ ಗ್ರಾಮದ ಜನರ ಕುಂದು ಕೊರತೆ ಸಮಸ್ಯೆಗಳ ಬಗ್ಗೆ ಆಲಿಸಿ, ಸ್ಥಳದಲ್ಲಿ ಪರಿಹಾರ ಕಲ್ಪಿಸಲು ಗ್ರಾಮ ವಾಸ್ತವ್ಯ ಕಾರ್ಯಕ್ರಮ ನಡೆಸಲಾಗುತ್ತಿದೆ. ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ಗ್ರಾ.ಪಂ.ಅಧ್ಯಕ್ಷೆ ಸುಜಾತಾ ಆರ್. ಪೂಜಾರಿ ಅಧ್ಯಕ್ಷತೆ ವಹಿಸಿದ್ದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ತುಳಸಿ, ಗ್ರಾ.ಪಂ.ಉಪಾಧ್ಯಕ್ಷ ಯೋಗೀಶ ಆಚಾರ್ಯ, ತಾಲೂಕು ಆರೋಗ್ಯಾಧಿಕಾರಿ ಡಾ. ಉಮೇಶ್ ಅಡ್ಯಂತಾಯ ಉಪಸ್ಥಿತರಿದ್ದರು. ಸಭಾ ಕಾರ್ಯಕ್ರಮದ ಬಳಿಕ ತಹಶೀಲ್ದಾರ್ ಅವರು ಜನರಿಂದ ಅಹವಾಲು ಸ್ವೀಕರಿಸಿದರು.