ಮಂಗಳೂರು, ಅ 15 (DaijiworldNews/DB): ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರಿಗೆ ದುಷ್ಕರ್ಮಿಗಳು ತಲವಾರು ಝಳಪಿಸಿದ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಇದರ ಹಿಂದಿನ ಜಾಲವನ್ನು ಪತ್ತೆ ಹಚ್ಚುವ ನಿಟ್ಟಿನಲ್ಲಿ ಸಮಗ್ರ ತನಿಖೆಗೆ ಆದೇಶಿಸುವಂತೆ ಮುಖ್ಯಮಂತ್ರಿ ಹಾಗೂ ಗೃಹ ಸಚಿವರನ್ನು ವಿನಂತಿಸಲಾಗಿದೆ ಎಂದು ಬಂದರು, ಮೀನುಗಾರಿಕೆ ಹಾಗೂ ಒಳನಾಡು ಜಲಸಾರಿಗೆ ಸಚಿವ ಎಸ್. ಅಂಗಾರ ತಿಳಿಸಿದ್ದಾರೆ.
ಬೆಳ್ತಂಗಡಿಯಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳ ಮೂಲಕ ಜನಮನ ಗೆದ್ದಿರುವ ಯುವ ಶಾಸಕ ಪೂಂಜ ಅವರಿಗೆ ಬೆದರಿಕೆ ಒಡ್ಡಿರುವುದನ್ನು ಸಹಿಸಲು ಸಾಧ್ಯವಿಲ್ಲ ಎಂದವರು ಹೇಳಿದ್ದಾರೆ.
ಕರಾವಳಿಯಲ್ಲಿ ಶಾಂತಿ ಕದಡಲು ಯತ್ನಿಸುತ್ತಿರುವ ದುಷ್ಕರ್ಮಿಗಳ ಜಾಲ ಇದರೆ ಹಿಂದೆ ಎನ್ನುವ ಶಂಕೆ ಇದೆ. ಸಮಗ್ರ ತನಿಖೆ ನಡೆಸಿ ಇದರ ಹಿಂದಿನ ಜಾಲವನ್ನು ಪತ್ತೆ ಹಚ್ಚುವಂತೆ ಪೊಲೀಸ್ ಇಲಾಖೆಗೆ ಸೂಚಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.