ಉಡುಪಿ, ಫೆ 15(SM): ಉಡುಪಿ ಜಿಲ್ಲಾ ಪಂಚಾಯತ್ ಗೆ ಕೋಟದಿಂದ ಆಯ್ಕೆಯಾಗಿದ್ದ ಸದಸ್ಯ ರಾಘವೇಂದ್ರ ಕಾಂಚನ್ ರವರನ್ನು ಬಿಜೆಪಿ ಪಕ್ಷದಿಂದ ಉಚ್ಛಾಟನೆಗೊಳಿಸಿ ಆದೇಶ ಹೊರಡಿಸಲಾಗಿದೆ.
ಇತ್ತೀಚೆಗೆ ಕೋಟದಲ್ಲಿ ನಡೆದ ಜೋಡಿ ಕೊಲೆ ಪ್ರಕರಣದಲ್ಲಿ ಭಾಗಿಯಾದ ಬಗ್ಗೆ ಹೆಸರು ಕೇಳಿ ಬಂದ ಹಿನ್ನೆಲೆಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಆದೇಶ ಹೊರಡಿಸಿದ್ದಾರೆ. ಇನ್ನು ಪ್ರಕರಣದಲ್ಲಿ ಆರೋಪಿಗಳ ಜತೆ ನಿರಂತರ ಸಂಪರ್ಕದಲ್ಲಿದ್ದ ಆರೋಪ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ರಾಘವೇಂದ್ರ ಕಾಂಚನ್ ಅವರನ್ನು ಪಕ್ಷದಿಂದ ಉಚ್ಛಾಟಿಸಲಾಗಿದೆ.
ಇನ್ನು ಕೋಟದ ಮಣೂರು ಚಿಕ್ಕನಕೆರೆ ಎಂಬಲ್ಲಿ ಜನವರಿ 26ರಂದು ಯತೀಶ್ ಹಾಗೂ ಭರತ್ ಎಂಬ ಇಬ್ಬರು ಯುವಕರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಚಂದ್ರಶೇಖರ ರೆಡ್ಡಿಯನ್ನು ಫೆಬ್ರವರಿ 14ರಂಡು ಪೊಲೀಸರು ಬಂಧಿಸಿದ್ದರು. ಅಲ್ಲದೆ ಪ್ರಕರಣದಲ್ಲಿ ಆರೋಪಿಗಳಿಗೆ ನೆರವಾದ ಹಿನ್ನೆಲೆಯಲ್ಲಿ ಇಬ್ಬರು ಪೊಲೀಸ್ ಪೇದೆಗಳಾನ್ನೂ ಕೂಡ ಬಂಧಿಸಲಾಗಿದ್ದು, ಇದುವರೆಗೆ 16 ಮಂದಿಯನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿದೆ.