ಮಂಗಳೂರು, ಅ 17 (DaijiworldNews/MS): ಗುರುಪುರದ ಮಳಲಿ ಜುಮ್ಮಾ ಮಸೀದಿ ಕಟ್ಟಡದಲ್ಲಿ ದೇವಾಲಯ ಹೋಲುವ ರಚನೆಗಳು ಕಂಡು ಬಂದಿರುವ ಹಿನ್ನೆಲೆಯಲ್ಲಿ ಹುಟ್ಟಿಕೊಂಡ ವಿವಾದಕ್ಕೆ ಸಂಬಂಧಿಸಿ ಮಂಗಳೂರಿನ ಸಿವಿಲ್ ಕೋರ್ಟ್ ತೀರ್ಪನ್ನು ಮುಂದೂಡಿದೆ. ನ.9ಕ್ಕೆ ತೀರ್ಪು ನೀಡುವುದಾಗಿ ನ್ಯಾಯದೀಶರು ಹೇಳಿದ್ದಾರೆ.
ಕೋರ್ಟ್ ಕಮಿಷನರ್ ಮೂಲಕ ಸರ್ವೆ ಮಾಡುವಂತೆ ವಿಎಚ್ಪಿ ಮನವಿ ಮಾಡಿತ್ತು. ಆ ಬಳಿಕ ಮಸೀದಿಯ ಜಾಗಕ್ಕೆೆ ಸಂಬಂಧಿಸಿದಂತೆ ವಕ್ಫ್ ಮತ್ತು ಸಿವಿಲ್ ನ್ಯಾಯಾಲಯದ ಅಧಿಕಾರದ ಬಗ್ಗೆೆ ವಾದ ವಿವಾದ ನಡೆದಿತ್ತು. ಈ ಕುರಿತಾದ ಆದೇಶವನ್ನು ನ್ಯಾಯಾಲಯ ಅ.17ಕ್ಕೆ ನಿಗದಿಗೊಳಿಸಿತ್ತು. ಇದೀಗ ಆದೇಶವನ್ನು ಮತ್ತೊಮ್ಮೆ ಮುಂದೂಡಲಾಗಿದೆಈ ಹಿಂದೆ ಸೆಪ್ಟೆಂಬರ್ 27ರಂದು ಮಂಗಳೂರು ಕೋರ್ಟ್ ತೀರ್ಪನ್ನು ಮುಂದೂಡಿತ್ತು. ಇದೀಗ ಮತ್ತೆ ಮಂಗಳೂರು ಕೋರ್ಟ್ ತೀರ್ಪನ್ನು ಮೂರನೇ ಬಾರಿ ಮುಂದೂಡಿದೆ.
2022ರ ಎಪ್ರಿಲ್ನಲ್ಲಿ ಮಳಲಿ ಮಸೀದಿ ನವೀಕರಣದ ವೇಳೆ ಕಟ್ಟಡ ಕೆಡವಿದ ಸಂದರ್ಭ ಹಿಂದೂ ಶೈಲಿಯ ಮರದ ಕೆತ್ತನೆ ಪತ್ತೆಯಾಗಿತ್ತು. ಈ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಸ್ಥಳದಲ್ಲಿ ಪೊಲೀಸ್ ನಿಯೋಜನೆ ಮಾಡಿ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು.