ಮಂಗಳೂರು, ಫೆ 16(SM): ಪಣಂಬೂರು ಠಾಣಾ ವ್ಯಾಪ್ತಿಯ ಪಣಂಬೂರು ಎನ್.ಎಂ.ಪಿ.ಟಿ ಬಸ್ ನಿಲ್ದಾಣದ ಬಳಿ ರೀನಸ್ ಲೊಜಿಸ್ಟಿಕ್ ಕಂಪನಿಯ ಟ್ಯಾಂಕರೊಂದರಿಂದ 900 ಲೀಟರ್ ಡೀಸೆಲ್ ಕಳ್ಳತನ ಮಾಡಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ.
ಉತ್ತರ ಪ್ರದೇಶ ಮೂಲದ ಪ್ರೇಮಚಂದ್ರ ಯಾದವ್ ಯಾನೆ ಪ್ರೇಮ್, ನಾನ್ ಬಾಬು ಯಾನೆ ನಾನ್ ಯಾನೆ ಬಾಬು, ಬಲವಂತ್ ಕುಮಾರ್ ಮತ್ತು ರಾಜ್ ಕುಮಾರ್ ರಜಾಕ್ ಯಾನೆ ಲಾಲಾ ಬಂಧಿತ ಆರೋಪಿಗಳಾಗಿದ್ದಾರೆ.
ರೀನಸ್ ಲೊಜಿಸ್ಟಿಕ್ ಕಂಪನಿಯ ಮ್ಯಾನೇಜರ್ ನೀಡಿದ ದೂರಿನಂತೆ ಕಳ್ಳತನ ಪ್ರಕರಣ ದಾಖಲಿಸಲಾಗಿತ್ತು. ಆರೋಪಿಗಳನ್ನು ದಸ್ತಗಿರಿ ಮಾಡಿದ ಪೊಲೀಸರು ಆರೋಪಿತರು ಕಳ್ಳತನ ಮಾಡಿ ಬಚ್ಚಿಟ್ಟ ಸ್ಥಳದಿಂದ 900 ಲೀಟರ್ ಡೀಸೆಲ್ ಮತ್ತು ಕೃತ್ಯಕ್ಕೆ ಬಳಸಿದ ಇತರ ಪರಿಕರಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ಈ ಪ್ರಕರಣದ ಪತ್ತೆ ಕಾರ್ಯವು ಮಂಗಳೂರು ಉತ್ತರ ವಿಭಾಗದ ಸಹಾಯಕ ಪೊಲೀಸ್ ಆಯುಕ್ತ ಶ್ರೀನಿವಾಸ ಗೌಡ ಇವರ ನೇತೃತ್ವ್ವದಲ್ಲಿ ಪಣಂಬೂರು ಠಾಣಾ ಪೊಲೀಸು ನಿರೀಕ್ಷಕರಾದ ರಫೀಕ್ ಕೆ.ಎಮ್, ಪಣಂಬೂರು ಠಾಣಾ ಪಿ.ಎಸ್.ಐ ಉಮೇಶ್ ಕುಮಾರ್.ಎಂ.ಎನ್ ಹಾಗೂ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.