ಪುತ್ತೂರು, ಅ 19 (DaijiworldNews/HR): ಬೆಂಗಳೂರು ಮೂಲದ ವ್ಯಕ್ತಿಯೊಬ್ಬರ ಮೃತ ದೇಹ ಪುತ್ತೂರಿನ ದರ್ಬೆಯಲ್ಲಿರುವ ಲಾಡ್ಜ್ವೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಅ.18 ರ ತಡ ರಾತ್ರಿ ಪತ್ತೆಯಾಗಿದೆ ಎಂದು ತಿಳಿದು ಬಂದಿದೆ.
ಸಾಂದರ್ಭಿಕ ಚಿತ್ರ
ಮೃತಪಟ್ಟವರನ್ನು ಬೆಂಗಳೂರು ಮೂಲದ ಸುಮಾರು 51 ವರ್ಷ ಪ್ರಾಯದ ವ್ಯಕ್ತಿ ಎಂದು ಗುರುತಿಸಲಾಗಿದೆ.
ಬೆಂಗಳೂರಿನ ವ್ಯಕ್ತಿಯು ಅ.16 ಕ್ಕೆ ಪುತ್ತೂರಿಗೆ ಬಂದು ಲಾಡ್ಜ್ನಲ್ಲಿ ರೂಮ್ ಮಾಡಿದ್ದು,ಅ.18 ರ ತಡ ರಾತ್ರಿ ಅವರ ಮೃತ ದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಘಟನೆ ಕುರಿತು ಪುತ್ತೂರು ನಗರ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ತೆರಳಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಪುತ್ತೂರು ಸರಕಾರಿ ಆಸ್ಪತ್ರೆಗೆ ಸಾಗಿಸಿದ್ದಾರೆ.
ಇನ್ನು ಮೃತರ ಗುರುತು ಪತ್ತೆಗಾಗಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.