ಉಡುಪಿ, ಅ 20 (DaijiworldNews/HR): ಭೂತ ಕೋಲ ಹಿಂದೂ ಸಂಸ್ಕೃತಿ ಭಾಗವಲ್ಲ ಎಂದು ಹೇಳಿಕೆ ನೀಡಿರುವ ನಟ ಚೇತನ್ ಅಹಿಂಸ ವಿರುದ್ಧ ಉಡುಪಿಯ ಕಾರ್ಕಳ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಚೇತನ್ ಹೇಳಿಕೆಯಿಂದ ಹಿಂದೂ ಧರ್ಮದ ನಂಬಿಕೆಗೆ ದಕ್ಕೆ ಉಂಟಾಗಿದ್ದು, ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಹಿಂದೂ ಜಾಗರಣಾ ವೇದಿಕೆಯು ಉಡುಪಿಯ ಕಾರ್ಕಳ ಪೊಲೀಸ್ ಠಾಣೆಯಲ್ಲಿ ದೂರು ನೀಡಿದೆ.
ನಮ್ಮ ಕನ್ನಡದ ಚಲನಚಿತ್ರ 'ಕಾಂತಾರ'ವು ರಾಷ್ಟ್ರಮಟ್ಟದಲ್ಲಿ ಸದ್ದು ಮಾಡುತ್ತಿರುವುದು ಖುಷಿಯ ಸಂಗತಿ. ಭೂತಕೋಲವು ಹಿಂದೂ ಸಂಸ್ಕೃತಿಗೆ ಸೇರುತ್ತದೆ ಎಂದು ನಿರ್ದೇಶಕ ರಿಷಬ್ ಶೆಟ್ಟಿಯವರು ಹೇಳಿದ್ದಾರೆ. ಇದು ನಿಜವಲ್ಲ. ನಮ್ಮ ಪಂಬದ/ನಲಿಕೆ/ಪರವರ ಬಹುಜನ ಸಂಪ್ರದಾಯಗಳು, ವೈದಿಕ-ಬ್ರಾಹ್ಮಣ್ಯದ ಹಿಂದೂ ಧರ್ಮಕ್ಕಿಂತ ಹಿಂದಿನಿಂದ ಇರುವವು. ಮೂಲನಿವಾಸಿ ಸಂಸ್ಕೃತಿಗಳನ್ನು ಪರದೆಯ ಮೇಲೆಯಾಗಲಿ, ಅದರಾಚೆಯಾಗಲಿ, ಸತ್ಯ ಸಂಗತಿಗಳೊಂದಿಗೆ ತೋರಿಸಬೇಕೆಂದು ನಾವು ಕೇಳುತ್ತೇವೆ ಚೇತನ್ ಸೋಶಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದು, ಇದಕ್ಕೆ ವ್ಯಾಪಕ ಟೀಕೆ ವ್ಯಕ್ತವಾಗಿದೆ.