ಉಡುಪಿ, ಅ 20 (DaijiworldNews/HR): ಉಡುಪಿ ಸರಕಾರಿ ಜಿಲ್ಲಾ ಆಸ್ಪತ್ರೆಯಲ್ಲಿ ರಕ್ತದ ಅಭಾವ ಇರುವುದನ್ನು ಮನಗಂಡು ಉಡುಪಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿತ್ತು. ಉಡುಪಿ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ನಡೆದ ಶಿಬಿರದಲ್ಲಿ ನೂರಾರು ಮಂದಿ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿ ರಕ್ತದಾನ ಮಾಡಿದರು.
ಇದೇ ಸಂಧರ್ಭದಲ್ಲಿ ರಕ್ತದಾನ ಮಾಡಿದ ಕಾರ್ಯಕರ್ತರಿಗೆ ಬ್ಲಾಖ್ ಕಾಂಗ್ರೆಸ್ ಅಧ್ಯಕ್ಷ್ಯರಾದ ರಮೇಶ್ ಕಾಂಚನ್ ಪ್ರಮಾಣ ಪತ್ರ ನೀಡಿ ಗೌರವಿಸಿದರು.
ಈ ಸಂಧರ್ಭದಲ್ಲಿ ಮಾತನಾಡಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ್ಯರಾದ ರಮೇಶ್ ಕಾಂಚನ್ ಮಾತನಾಡಿ “ಉಡುಪಿ ಬ್ಲಾಕ್ ಕಾಂಗ್ರೆಸ್ ನ ನೇತೃತ್ವದಲ್ಲಿ ಇಂದು ಬೃಹತ್ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿದೆ. ಬಹಳಷ್ಟು ಮಂದಿ ಬಡವರು, ನಿರ್ಗತಿಕರು ಜಿಲ್ಲಾ ಆಸ್ಪತ್ರೆಯಲ್ಲಿ ದಾಖಲಾದ ಸಂಧರ್ಭದಲ್ಲಿ ರಕ್ತದ ಕೊರತೆಯನ್ನು ಎದುರಿಸುತ್ತಿರುವುದು ನಮಗೆ ಕಂಡು ಬಂದಿತ್ತು. ಇದನ್ನು ಗಮನಿಸಿ ಈ ರಕ್ತದಾನ ಶಿಬಿರವನ್ನು ನಾವು ಆಯೋಜಿಸಿದ್ದೇವೆ. ನಾವು ನಿರೀಕ್ಷೆ ಮಾಡಿದ್ದಕ್ಕಿಂತ ಅಧಿಕ ಮಂದಿ ಈ ಶಿಬಿರದಲ್ಲಿ ಭಾಗವಹಿಸಿ ರಕ್ತದಾನ ಮಾಡಿದ್ದಾರೆ. ಇನ್ನು ಮುಂದೆ ಕೂಡಾ ರಕ್ತದ ಅವಶ್ಯಕತೆ ಬಿದ್ದ ಸಂಧರ್ಬದಲ್ಲಿ ಉಡುಪಿ ಬ್ಲಾಕ್ ಕಾಂಗ್ರೆಸ್ ನ ಎಲ್ಲಾ ಪಧಾಧಿಕಾರಿಗಳು ಮತ್ತು ಸದಸ್ಯರು ಮುಂದೆ ಬಂದು ರಕ್ತದಾನ ಮಾಡಲಿದ್ದಾರೆ” ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾ ರಕ್ತನಿಧಿ ವಿಭಾಗದ ಡಾ. ವೀಣಾ, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಪ್ರಖ್ಯಾತ್ ಶೆಟ್ಟಿ, ಕೆಪಿಸಿಸಿ ನಾಯಕರಾದ ಎಂ ಎ ಗಫೂರ್, ವೆರೋನಿಕಾ ಕರ್ನೆಲಿಯೊ, ಮತ್ತು ಇತರರು ಉಪಸ್ಥಿತರಿದ್ದರು.