ಮಂಗಳೂರು, ಅ 23 (DaijiworldNews/DB): ಕಾಂಗ್ರೆಸ್ ನಾಯಕಿ ಪ್ರತಿಭಾ ಕುಳಾಯಿ ಅವರ ಫೋಟೋ ಮತ್ತು ವೀಡಿಯೋ ಬಳಸಿಕೊಂಡು ಅಸಹ್ಯವಾಗಿ ಎಡಿಟ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹಾಕಿರುವ ಕುರಿತಂತೆ ಮಂಗಳೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುರತ್ಕಲ್ ಟೋಲ್ಗೇಟ್ ವಿರುದ್ದ ಅಕ್ಟೋಬರ್ 18ರಂದು ನಡೆದ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಪ್ರತಿಭಾ ಕುಳಾಯಿ ಅವರನ್ನು ಪೊಲೀಸರು ಬಂಧಿಸುವ ವೇಳೆ ಅವರು ಇದಕ್ಕೆ ಪ್ರತಿರೋಧ ಒಡ್ಡಿದ್ದರು.
ಈ ವೇಳೆ ಅಲ್ಲಿ ತೆಗೆದ ಫೋಟೋ ಮತ್ತು ವೀಡಿಯೋಗಳನ್ನು ಶ್ಯಾಮಸುಂದರ್ ಭಟ್ ಹೊಸಮೂಲೆ ಎಂಬವರು ಅಸಹ್ಯ ರೀತಿಯಲ್ಲಿ ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದರು. ಅಲ್ಲದೆ ಅವಹೇಳನಕಾರಿಯಾಗಿಯೂ ಕಮೆಂಟ್ ಮಾಡಿ ಮಾನಹಾನಿ ಮಾಡಿದ್ದಾರೆ ಎಂದು ಆರೋಪಿಸಿ ಪ್ರಕರಣ ದಾಖಲು ಮಾಡಲಾಗಿದೆ.