ಪುತ್ತೂರು, ಅ 23 (daijiworldNews/HR): ಪಹುಲ್ಲು ಕಟಾವು ಮಾಡುತ್ತಿದ್ದಾಗ ಪುತ್ತೂರು ತಾಲೂಕಿನ ಚಿಕ್ಕಮುಟ್ನೂರು ಗ್ರಾಮದ ಸಿದ್ಯಾಲದ ಗುಡ್ಡದಲ್ಲಿರುವ ತೆಂಗಿನ ಮರದ ಬುಡದಲ್ಲಿ ಮಾನವ ತಲೆಬುರುಡೆ, ಅಸ್ಥಿಪಂಜರ ಪತ್ತೆಯಾಗಿರುವ ಘಟನೆ ನಡೆದಿದೆ.
ತೋಟದಲ್ಲಿ ಬೆಳೆದಿರುವ ಹುಲ್ಲನ್ನು ಕಟಾವು ಮಾಡಿಸುತ್ತಿದ್ದಾಗ ತೆಂಗಿನ ಬುಡದಲ್ಲಿ ಮಾನವನ ತಲೆ ಬುರುಡೆ ಮತ್ತು ಅಸ್ಥಿಪಂಜರ ಪತ್ತೆಯಾಗಿದ್ದು, ಈ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡಿದ್ದು, ಬಳಿಕ ಸ್ಥಳಕ್ಕೆ ಮಂಗಳೂರು ವಿಧಿ ವಿಜ್ಞಾನ ಪ್ರಯೋಗಾಲಯದ ತಂಡ ಭೇಟಿ ನೀಡಿದೆ.
ಇನ್ನು ವ್ಯಕ್ತಿ ಧರಿಸಿದ್ದ ಬಟ್ಟೆ ಅದನ್ನು ಸುತ್ತುವರಿದಿದ್ದು ಶರ್ಟ್ ಕಿಸೆಯಲ್ಲಿ ಪ್ಲಾಸ್ಟಿಕ್ ಕವರ್ ಇದ್ದು, ಆ ಪ್ಲಾಸ್ಟಿಕ್ ಕವರ್ನ ಒಳಗೆ ರೂ.100 ಮತ್ತು 50ರ ನೋಟು ಮತ್ತು ಚಿಲ್ಲರೆ ನಾಣ್ಯ ಹಾಗೂ ಸಣ್ಣ ಕೀ, ಅಲ್ಲೇ ಸಮೀಪ ಚಪ್ಪಲಿ ಪತ್ತೆಯಾಗಿದೆ ಎನ್ನಲಾಗಿದೆ.
ಅಸ್ಥಿಪಂಜರದ ಕೆಲವು ಭಾಗವನ್ನು ಬೆಂಗಳೂರು ಪ್ರಯೋಗಾಲಯಕ್ಕೆ ಡಿಎನ್ಎ ಪರೀಕ್ಷೆಗೆ ಕಳುಹಿಸಬೇಕಾಗಿದ್ದು, ಉಳಿದ ಅಸ್ಥಿಪಂಜರಗಳನ್ನು ಪೊಲೀಸ್ ಭದ್ರತೆಯಲ್ಲಿ ಇರಿಸಲಾಗಿದೆ.