ಸುಳ್ಯ, ಅ 24 (DaijiworldNews/DB): ನಗರದ ಜಟ್ಟಿಪಳ್ಳ ನಿವಾಸಿ, ಸುಳ್ಯ ನಗರ ಪಂಚಾಯತ್ನ ಮಾಜಿ ಉಪಾಧ್ಯಕ್ಷೆ ಶಾಂತಿ ಪ್ರಭು ಅವರ ಪತಿ ಕೇಶವ ಪ್ರಭು ಅವರು ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಸದ್ಯ ಅವರ ಸ್ಥಿತಿ ಗಂಭೀರವಾಗಿದ್ದು, ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಇಂದು ಬೆಳಗ್ಗೆ 11ರ ಸುಮಾರಿಗೆ ಅವರು ತಲೆಗೆ ಪಿಸ್ತೂಲಿನಿಂದ ಗುಂಡು ಹಾರಿಸಿಕೊಂಡಿದ್ದಾರೆ. ಗಂಭೀರ ಸ್ಥತಿಯಲ್ಲಿ ಅವರನ್ನು ಕೂಡಲೇ ಆಸ್ಪತ್ರೆಗೆ ಸಾಗಿಸಲಾಗಿದೆ.
ಘಟನೆಗೆ ಕಾರಣವೇನೆಂದು ತಿಳಿದು ಬಂದಿಲ್ಲ.