ಮಂಗಳೂರು, ಅ 26 (DaijiworldNews/MS): ನಾಡಪ್ರಭು ಕೆಂಪೇಗೌಡ ಅವರ 108 ಅಡಿ ಎತ್ತರದ ಕಂಚಿನ ಪ್ರತಿಮೆ ಬೆಂಗಳೂರಿನಲ್ಲಿ ಉದ್ಘಾಟನೆಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಪವಿತ್ರ ಮೃತ್ತಿಕೆ (ಮಣ್ಣು) ಸಂಗ್ರಹ ಅಭಿಯಾನಕ್ಕೆ ಅ.26ರ ಗುರುವಾರ ನಗರದ ಬ್ರಹ್ಮಶ್ರೀ ನಾರಾಯಣ ಗುರು ವೃತ್ತದ ಬಳಿ ಇರುವ ಮಂಗಳೂರು ಮಹಾನಗರ ಪಾಲಿಕೆಯ ಈಜುಕೊಳದ ಆವರಣದಲ್ಲಿ ಚಾಲನೆ ನೀಡಲಾಯಿತು.
ರಾಜ್ಯದೆಲ್ಲೆಡೆಯಿಂದ ಪವಿತ್ರ ಮೃತ್ತಿಕೆ (ಮಣ್ಣು) ಸಂಗ್ರಹ ಅಭಿಯಾನವು ಅ.26ರಿಂದ ನವೆಂಬರ್ 7ರ ವರೆಗೆ ನಡೆಯಲಿದೆ.
ಇಂಧನ, ಕನ್ನಡ ಮತ್ತು ಸಂಸ್ಕೃತಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸುನಿಲ್ ಕುಮಾರ್, ಸಂಸದರಾದ ನಳಿನ್ ಕುಮಾರ್ ಕಟೀಲ್, ಶಾಸಕರಾದ ವೇದವ್ಯಾಸ ಕಾಮತ್, ಡಾ. ಭರತ್ ಶೆಟ್ಟಿ, ಸಂಜೀವ ಮಠಂದೂರು, ವಿಧಾನ ಪರಿಷತ್ ಶಾಸಕರಾದ ಪ್ರತಾಪ್ ಸಿಂಹ ನಾಯಕ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಮಂಗಳೂರು ಮೇಯರ್ ಜಯಾನಂದ ಅಂಚನ್, ಉಪ ಮೇಯರ್ ಪೂರ್ಣಿಮ, ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ., ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್,ಆದಿ ಚುಂಚನಗಿರಿ ಶಾಖಾ ಮಠದ ಡಾ.
ಧರ್ಮಪಾಲನಾ ಸ್ವಾಮೀಜಿ ಹಾಗೂ ಇತರೆ ಗಣ್ಯರು ಚಾಲನೆ ನೀಡಿದರು.
ಅಲ್ಲದೇ ಇದೇ ಸಂದರ್ಭದಲ್ಲಿ ಗಣ್ಯರು ಕೆಂಪೇಗೌಡ ರಥಕ್ಕೆ ಚಾಲನೆ ನೀಡಿದರು.