ಉಡುಪಿ, ಅ 27 (DaijiworldNews/HR): ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಅಕ್ಟೋಬರ್ 29 ರಂದು ಮದ್ಯಾಹ್ನ 2 ಗಂಟೆಗೆ ಬೃಹತ್ ತಿರಂಗಾ ಬೈಕ್ ರ್ಯಾಲಿಯನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಅದ್ಯಕ್ಷ್ಯರಾದ ದೀಪಕ್ ಕೋಟ್ಯಾನ್ ಇನ್ನಾ ತಿಳಿಸಿದರು.
ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ಇದೊಂದು ರಾಜಕೀಯ ರಹಿತವಾದ ರ್ಯಾಲಿ ಆಗಿದೆ. ಸುಮಾರು 5 ರಿಂದ 6 ಸಾವರ ಮಂದಿ ಈ ರ್ಯಾಲಿಯಲ್ಲಿ ಭಾಗವಹಿಸುವ ನಿರೀಕ್ಷೆ ಇದೆ ಎಂದರು.
ರ್ಯಾಲಿಯ ಕುರಿತು ಮಾಹಿತಿ ಹಂಚಿಕೊಂಡು ಮಾತನಾಡಿದ ಜಿಲ್ಲಾ ಕಾಂಗ್ರೆಸ್ ವಕ್ತಾರ ಬಿಪಿನ್ ಚಂದ್ರಪಾಲ್ ನಕ್ರೆ ಮಾತನಾಡಿ, ಉಡುಪಿ ಜಿಲ್ಲೆಯ ಎಲ್ಲಾ ತಾಲ್ಲೂಕುಗಳಿಂದ ಯುವಕರು ಬೈಕ್ ನಲ್ಲಿ ಆಗಮಿಸಲಿದ್ದಾರೆ. ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂಧರ್ಭದಲ್ಲಿ ಸ್ವಾತಂತ್ರ್ಯಕ್ಕಾಗಿ ಬಲಿದಾನ ಮಾಡಿರುವ ವೀರರನ್ನು ನೆನೆಯುವುದು ನಮ್ಮ ಕರ್ತವ್ಯ, ಯುವಕರಲ್ಲಿ ಈ ಕುರಿತು ಜಾಗೃತಿ ಮೂಡಿಸಿ ಅವರಿಗೆ ಸ್ವಾತಮತ್ರ್ಯ ಹೋರಾಟಗಾರರನ್ನು ಪರಿಚಯಿಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಬೈಕ್ ರ್ಯಾಲಿಯು ಕಾರ್ಕಳದ ಇನ್ನಾ ಗ್ರಾಮದಿಂದ ಪ್ರಾರಂಭಿಸಿ ಬೆಳ್ಮಣ್, ನಿಟ್ಟೆ, ಕಾರ್ಕಳ ಪೇಟೆ ಮೂಲಕವಾಗಿ ಕಾರ್ಕಳದ ಬಂಡೀಮಠದಲ್ಲಿ ಸಮಾಪನಗೊಳ್ಳಲಿದೆ. ಕಾಂಗ್ರೆಸ್ ನಾಯಕರಾದ ವೀರಪ್ಪ ಮೊಯ್ಲಿ, ಕೆಪಿಸಿಸಿ ಕಾರ್ಯಾಧ್ಯಕ್ಷ್ಯರಾದ ಧ್ರುವ ನಾರಾಯಣ್, ಮಾಜಿ ಸಚಿವರಾದ ಅಭಯಚಂದ್ರ ಜೈನ್, ವಿನಯ್ ಕುಮಾರ್ ಸೊರಕೆ, ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ್ಯರಾದ ಮೊಹಮ್ಮದ್ ಹ್ಯಾರಿಸ್ ನಲಪಾಡ್ ಮತ್ತಿತರರು ಭಾಗವಹಿಸಲಿದ್ದಾರೆ. ಬಂಡೀಮಠದಲ್ಲಿ ಸಮಾರೊಪ ಸಮಾರಂಭ ನಡೆಯಲಿದೆ ಎಂದವರು ತಿಳಿಸಿದರು.
ಪತ್ರಿಕಾಗೋಷ್ಟಿಯಲ್ಲಿ ಮುಖಂಡರಾದ ಪ್ರಭಾಕರ್ ಬಂಗೇರ, ರಮೀಜ್ ಹುಸೇನ್, ಸೌರಭ್ ಬಲ್ಲಾಳ್, ಯೋಗೀಶ್ ಆಚಾರ್ಯಾ, ಗುರುಪ್ರಸಾದ್ ಹೇರೂರು, ಶಬರೀಶ್ ಸುವರ್ಣ,. ಪ್ರೀತಿ ಸಾಲಿನ್ಸ್ ಮತ್ತಿತರರು ಉಪಸ್ಥಿತರಿದ್ದರು.