ಕುಂದಾಪುರ, ಅ 28 (DaijiworldNews/HR): ರಾಜ್ಯದೆಲ್ಲೆಡೆ ಕೋಟಿಕಂಠ ಗಾಯನ ಕಾರ್ಯಕ್ರಮ ನಡೆಯುತ್ತಿದೆ. ಶುಕ್ರವಾರ ಬೆಳಿಗ್ಗೆ ಕುಂದಾಪುರದ ಬಿ.ಬಿ.ಹೆಗ್ಡೆ ಕಾಲೇಜು ವಿದ್ಯಾರ್ಥಿಗಳಿಂದ ಮರವಂತೆಯ ಕಡಲತೀರ ಹಾಗೂ ಸೌಪರ್ಣಿಕಾ ನದೀ ತೀರದ ಮಧ್ಯ ಭಾಗದಲ್ಲಿ ಸುಂದರ ರಮಣೀಯ ಸ್ಥಳದಲ್ಲಿ ಉಡುಪಿ ಬಿಜೆಪಿ ಯುವ ಮೋರ್ಚಾ ವತಿಯಿಂದ ಕೋಟಿ ಕಂಠ ಗಾಯನ ಕಾರ್ಯ ನಡೆಯಿತು.
ಶಾಸಕ ಬಿ.ಎಂ.ಸುಕುಮಾರ್ ಶೆಟ್ಟಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಅಕ್ಷಯ್ ಬಡಮನೆ , ವಿಜಯ ಲಕ್ಷ್ಮಿ ಮೆಟ್ಟಿನ ಹೊಳೆ, ಅಭಿಷೇಕ್ ಬಡಮನೆ ಹಾಡಿದರು. ಸುಮಾರು 200 ವಿದ್ಯಾರ್ಥಿಗಳು ಕೋಟಿ ಕಂಠ ಗಾಯನಕ್ಕೆ ಧ್ವನಿಯಾದರು.
ಜಿಲ್ಲಾ ಬಿಜೆಪಿ ಯುವ ಮೋರ್ಚಾದ ಅಧ್ಯಕ್ಷ ವಿಖ್ಯಾತ ಶೆಟ್ಟಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶರತ್ ಶೆಟ್ಟಿ ಉಪ್ಪುಂದ, ಬೈಂದೂರು ಮಂಡಲದ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ಉಡುಪಿ ಜಿಲ್ಲಾ ಯುವ ಮೋರ್ಚಾ ಕಾರ್ಯದರ್ಶಿ ಅಭಿರಾಜ್ ಸುವರ್ಣ, ಬೈಂದೂರು ಮಂಡಲದ ಪ್ರಧಾನ ಕಾರ್ಯದರ್ಶಿ ಪ್ರಿಯದರ್ಶಿನಿ ದೇವಾಡಿಗ, ಬೈಂದೂರು ಮಹಿಳಾ ಮೋರ್ಚಾದ ಅಧ್ಯಕ್ಷೆ ಭಾಗಿರಥಿ ಸುರೇಶ್, ಬೈಂದೂರು ತಾಪಂ ಮಾಜಿ ಉಪಾಧ್ಯಕ್ಷೆ ಮಾಲಿನಿ ಕೆ, ಕುಂದಾಪುರ ತಾಪಂ ಮಾಜಿ ಅಧ್ಯಕ್ಷೆ ಶ್ಯಾಮಲಾ ಕುಂದರ್, ಮಹಿಳಾ ಮಂಡಲ ಪ್ರಧಾನ ಕಾರ್ಯದರ್ಶಿ ದೀಪಾ ಶೆಟ್ಟಿ, ಬಿಬಿ ಹೆಗ್ಡೆ ಕಾಲೇಜಿನ ಉಪ ಪ್ರಾಂಶುಪಾಲ ಚೇತನ್ ಶೆಟ್ಟಿ ಕೊವಾಡಿ, ಉಪನ್ಯಾಸ ಪ್ರವೀಣ್ ಮೊಗವೀರ ಗಂಗೊಳ್ಳಿ, ಎನ್ ಎಸ್ ಎಸ್ ಸಹ ಯೋಜನಾಧಿಕಾರಿ ದೀಪಾ ಪೂಜಾರಿ, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.