ಉಡುಪಿ, ಅ 29 (DaijiowrldNews/HR): ರಾಜ್ಯ ಸರ್ಕಾರವುಅಲ್ಪಸಂಖ್ಯಾತಕಲ್ಯಾಣಇಲಾಖೆಯಿಂದ ಕ್ರಿಶ್ಚಿಯನ್ ಅಭಿವೃದ್ಧಿಸಮಿತಿ ಮೂಲಕ ಕ್ರಿಶ್ಚಿಯನ್ ಸಮುದಾಯದಅಭಿವೃದ್ಧಿಗೆ ಜಾರಿಗೊಳಿಸಿರುವ ವಿವಿಧ ಯೋಜನೆಗಳ ಪ್ರಯೋಜನಗಳನ್ನು ಸಮುದಾಯದಜನತೆ ಪಡೆಯುವಂತೆಕರ್ನಾಟಕರಾಜ್ಯ ಕ್ರಿಶ್ಚಿಯನ್ ಅಭಿವೃದ್ಧಿ ಸಮಿತಿಅಧ್ಯಕ್ಷಜೆ.ಕೆನಡಿ ಶಾಂತಕುಮಾರ್ ಹೇಳಿದರು.
ಉಡುಪಿ ಪ್ರವಾಸಿ ಮಂದಿರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಕ್ರಿಶ್ಚಿಯನ್ ಸಮುದಾಯದವರಿಗೆ ಇಲಾಖೆವತಿಯಿಂದದೊರೆಯುವ ವಿವಿಧ ಸೌಲಭ್ಯಗಳ ಬಗ್ಗೆ ಹಾಗೂ ವಿವಿಧ ಯೋಜನೆಗಳ ಬಗ್ಗೆ ಮಾಹಿತಿ ನೀಡಿದರು.
ಕ್ರಿಶ್ಚಿಯನ್ ಅಭಿವೃದ್ಧಿ ಸಮಿತಿವತಿಯಿಂದರಾಜ್ಯಾದ್ಯಂತ ಚರ್ಚ್ಗಳ ಜೀರ್ಣೋದ್ಧಾರ, ಸ್ಮಶಾನಗೋಡೆ, ಚರ್ಚ್ಆವರಣಗೋಡೆ ನಿರ್ಮಾಣ ಕಾಮಗಾರಿಗಳಿಗೆ, ಕ್ರಿಶ್ಚಿಯನ್ ಸಮುದಾಯ ಭವನಗಳ ನಿರ್ಮಾಣಕ್ಕೆ, ಕ್ರಿಶ್ಚಿಯನ್ ವೃದ್ಧಾಶ್ರಮಗಳು ಮತ್ತು ಅನಾಥಾಲಯಗಳ ಆಡಳಿತಾತ್ಮಕ ವೆಚ್ಚ ಪಾವತಿ ಮುಂತಾದ ಯೋಜನೆಗಳಿದ್ದು, ಸಮುದಾಯದಜನತೆಗೆ ಈ ಬಗ್ಗೆ ಮಾಹಿತಿಯಕೊರತೆಇದ್ದು, ಇದಕ್ಕಾಗಿರಾಜ್ಯಾದ್ಯಂತ ಸಂಚರಿಸಿ ಅರಿವು ಮೂಡಿಸಿ,ಸಮುದಾಯದಕಟ್ಟಕಡೆಯ ವ್ಯಕ್ತಿಗೂ ಸೌಲಭ್ಯಗಳನ್ನು ತಲುಪಿಸಲು ಪ್ರಯತ್ನಿಸಲಾಗುತ್ತಿದೆ ಎಂದರು.
ಈ ಕಾರ್ಯಕ್ರಮಗಳಲ್ಲದೇ ಸಮುದಾಯದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ, ಫೆಲೋಶಿಪ್, ಪ್ರೀ ಮೆಟ್ರಿಕ್ಮತ್ತು ಪೋಸ್ಟ್ ಮೆಟ್ರಿಕ್ ಹಾಸ್ಟೆಲ್ಗಳಲ್ಲಿ ಪ್ರವೇಶಾವಕಾಶ, ಪ್ರೋತ್ಸಾಹಕ ಸಾಲ ಯೋಜನೆಗಳು, ಟ್ಯಾಕ್ಸಿ ಮತ್ತುಗೂಡ್ಸ್ ವಾಹನಗಳ ಖರೀದಿಗೆ ಸಬ್ಸಿಡಿ, ನೇರ ಸಾಲ, ಶ್ರಮಶಕ್ತಿ ಸಾಲ, ಅರಿವು ಸಾಲ ನೀಡಲಾಗುತ್ತಿದ್ದು, ಈ ಎಲ್ಲಾ ಯೋಜನೆಗಳ ಸಂಪೂರ್ಣ ಪ್ರಯೋಜನಗಳನ್ನು ಸಮುದಾಯದಜನತೆ ಪಡೆಯಬೇಕು ಎಂದರು.
ಉಡುಪಿ ಜಿಲ್ಲೆಯಲ್ಲಿಇದುವರೆಗೆಉಡುಪಿ, ಮೂಡುಬೆಳ್ಳೆ ಮತ್ತು ತೆಗ್ಗರ್ಸೆಯಲ್ಲಿಒಟ್ಟು 3 ಕ್ರಿಶ್ಚಿಯನ್ ಸಮುದಾಯ ಭವನಗಳ ನಿರ್ಮಾಣಕ್ಕೆ 1.27 ಕೋಟಿಅನುದಾನ ಬಿಡುಗಡೆ ಮಾಡಲಾಗಿದ್ದು,ಇನ್ನೂ 2 ಸಮುದಾಯ ಭವನಗಳ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.
ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾಅಧಿಕಾರಿ ಸಚಿನ್ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.