ಬಂಟ್ವಾಳ, ಅ 30 (DaijiworldNews/DB): ಎರಡು ವರ್ಷಗಳ ಹಿಂದೆ ಗಾಂಜಾ ಮಾರಾಟ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯೋರ್ವನನ್ನು ವಿಟ್ಲ ಇನ್ಸ್ ಪೆಕ್ಟರ್ ನಾಗರಾಜ್ ಎಚ್. ಅವರ ನೇತೃತ್ವದ ತಂಡ ಕಾರ್ಯಚರಣೆ ನಡೆಸಿ ಬಂಧಿಸಿದೆ.
ಕನ್ಯಾನ ಗ್ರಾಮದ ಪೋಯ್ಯಗದ್ದೆ ನಿವಾಸಿ ಮಹಮ್ಮದ್ ಆಸಿಫ್ ಬಂಧಿತ ಆರೋಪಿ. ಖಚಿತ ಮಾಹಿತಿ ಮೇಲೆ 2020ರಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಅಡ್ಡೆಗೆ ವಿಟ್ಲಎಸ್ಐ ವಿನೋದ್ ರೆಡ್ಡಿ ನೇತೃತ್ವದ ತಂಡ ದಾಳಿ ನಡೆಸಿದ ಸಂದರ್ಭದಲ್ಲಿ ಅಮ್ರಾಜ್ ಎಂಬಾತ ಬಂಧಿಸಲ್ಪಟ್ಟಿದ್ದ. ಆದರೆ ಇನ್ನೋರ್ವ ಆರೋಪಿ ಆಸಿಫ್ ಪರಾರಿಯಾಗಿ ತಲೆ ಮರೆಸಿಕೊಂಡಿದ್ದ. ಕಳೆದ ಎರಡು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಆಸಿಫ್ಗಾಗಿ ಪೊಲೀಸರು ಹುಡುಕಾಟ ನಡೆಸಿದ್ದು, ಕೊನೆಗೂ ಪೋಲಿಸರ ಕೈಗೆ ಸಿಕ್ಕಿಬಿದ್ದಿದ್ದಾನೆ.
ಇದೀಗ ವಿಟ್ಲ ಪೋಲೀಸ್ ಇನ್ಸ್ಪೆಕ್ಟರ್ ನಾಗರಾಜ್ ಎಚ್. ಅವರ ನೇತೃತ್ವದ ಎಸ್ ಐ ಸಂದೀಪ್ ಅವರ ತಂಡ ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿ ದ್ದು, ನ್ಯಾಯಾಲಯ ಈತನಿಗೆ 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ.