ಬಂಟ್ವಾಳ, ಅ 31 (DaijiworldNews/SM): ಕಾಂಗ್ರೇಸ್ ನ್ನು ಸೋಲಿಸದ್ದಕ್ಕೆ ಜನ ಪಶ್ಚಾತ್ತಾಪ ಪಡುತ್ತಿದ್ದು, ಈ ಬಾರಿ ದ.ಕ.ಜಿಲ್ಲೆ ಜನರು ಬಿಜೆಪಿಯನ್ನು ಸೋಲಿಸಿ ಮತ್ತೆ ಕಾಂಗ್ರೇಸ್ ನ್ನು ಅಧಿಕಾರಕ್ಕೆ ತರುತ್ತಾರೆ ಎಂದು ಮಂಗಳೂರು ಶಾಸಕ ಯು.ಟಿ.ಖಾದರ್ ಅವರು ಹೇಳಿದ್ದಾರೆ.
ಅವರು ಬಿ.ಸಿ.ರೋಡಿನ ಪ್ರವಾಸಿ ಮಂದಿರದಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಶೇ. 50ರಷ್ಟು ಯುವಕರನ್ನು ಅಭ್ಯರ್ಥಿಯಾಗಿ ಕಾಂಗ್ರೇಸ್ ನಿಂದ ಸ್ಪರ್ದಿಸಲು ಎ.ಐ.ಐ.ಸಿ.ಸಿ.ತೀರ್ಮಾನ ಮಾಡಿದೆ ಎಂದು ಸ್ಪಷ್ಟ ಪಡಿಸಿದರು. ಕಾಂಗ್ರೇಸ್ ಯಾವುದೇ ಅಭಿವೃದ್ಧಿ ಕೆಲಸವನ್ನು ಚುನಾವಣೆ ದೃಷ್ಟಿಯಿಂದ ಮಾಡುವುದಿಲ್ಲ. ಬಿಜೆಪಿಯಿಂದ ಜನಸಾಮಾನ್ಯರಿಗೆ ಯಾವುದೇ ಪ್ರಯೋಜನವಾಗಿಲ್ಲ. ಕೆಲಸ ಮಾಡುವ ಪ್ರಮಾಣಿಕ ಅಧಿಕಾರಿಗಳನ್ನು ಭ್ರಷ್ಟ ಅಧಿಕಾರಿಯಾಗಿ ಮಾರ್ಪಾಡು ಮಾಡಿದ ಕೀರ್ತಿ ಬಿಜೆಪಿಯವರಿಗೆ ಸಲ್ಲುತ್ತದೆ ಎಂದು ಬಿಜೆಪಿಯ ಭ್ರಷ್ಟಾಚಾರದ ವಿರುದ್ದ ಹರಿಹಾಯ್ದರು.