ವಿಟ್ಲ, ನ 02 (DaijiworldNews/HR): ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿಯೊಬ್ಬರ ಶವ ಬಾವಿಯಲ್ಲಿ ಪತ್ತೆಯಾಗಿರುವ ಘಟನೆ ನಡೆದಿದೆ.
ನಾಪತ್ತೆಯಾಗಿದ್ದ ವಿಟ್ಲ ಪಡ್ನೂರು ಗ್ರಾಮದ ಪೆರುವಾಜೆ ನಿವಾಸಿ ದಿವಾಕರ (36) ಎಂಬಾತನ ಶವ ಬಾವಿಯಲ್ಲಿ ಪತ್ತೆಯಾಗಿದೆ.
ದಿವಾಕರ ಅವರು ಅನಾರೋಗ್ಯದಿಂದ ಬಳಲುತ್ತಿದ್ದು, ಕಳೆದ ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದು ಇಂದು ಬೆಳಿಗ್ಗೆ ಅವರ ಶವ ಕುಳ ಗ್ರಾಮದ ದಗಮಜಲು ಎಂಬಲ್ಲಿ ಬಾವಿಯಲ್ಲಿ ಪತ್ತೆಯಾಗಿದೆ.
ಅನಾರೋಗ್ಯದಿಂದ ಬಳಲುತ್ತಿದ್ದ ಈತ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರಬೇಕು ಎಂದು ಶಂಕಿಸಲಾಗಿದ್ದು, ಹೆಚ್ಚಿನ ಮಾಹಿತಿ ಪೋಲಿಸ್ ತನಿಖೆಯ ಬಳಿಕ ಸಿಗಬೇಕಾಗಿದೆ.,
ಸ್ಥಳಕ್ಕೆ ವಿಟ್ಲ ಇನ್ಸ್ ಪೆಕ್ಟರ್ ನಾಗರಾಜ್ ಎಚ್, ಎಸ್.ಐ.ಸಂದೀಪ್ ಹಾಗೂ ಸಿಬ್ಬಂದಿ ಗಳು ಬೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.