ಬೆಳ್ಳಾರೆ, ನ 02 (DaijiworldNews/HR): ಹತ್ಯೆಯಾಗಿರುವ ಬಿಜೆಪಿ ಯುವ ನಾಯಕ ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಅವರ ಕನಸಿನ ಮನೆಗೆ ಬಿಜೆಪಿ ರಾಜ್ಯಾಧ್ಯಕ್ಷ ಸಂಸದ ನಳಿನ್ ಕುಮಾರ್ ಕಟೀಲ್ ಇಂದು ಶಿಲಾನ್ಯಾಸ ನೇರವೆರಿಸಿದ್ದಾರೆ.
ಇಂದು ಬೆಳಗ್ಗೆ ಪ್ರವೀಣ್ ಕನಸಿನ ಮನೆಗೆ ಪ್ರವೀಣ್ ಸಮಾಧಿ ಬಳಿಯ ಜಾಗದಲ್ಲೇ 2.700 ಚ.ಅಡಿಯ ನೂತನ ಮನೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೇರವೇರಿಸಿದ್ದು, ಮೊಗರೋಡಿ ಕನ್ಸ್ ಸ್ಟ್ರೆಕ್ಷನ್ ಕಂಪನಿಗೆ ಮನೆ ನಿರ್ಮಾಣದ ಜವಾಬ್ದಾರಿಯನ್ನು ವಹಿಸಿದ್ದಾರೆ.
ಇನ್ನು ಈ ಸಂದರ್ಭದಲ್ಲಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ, ಸಚಿವ ಎಸ್.ಅಂಗಾರ ಶಾಸಕ ಸಂಜೀವ ಮಠಂದೂರು, ಪ್ರವೀಣ್ ಪತ್ನಿ ನೂತನ ಹಾಗೂ ಕುಟುಂಬಸ್ಥರು ಉಪಸ್ಥಿತರಿದ್ದರು.