ಉಡುಪಿ, ನ 03 (DaijiworldNews/SM): ರಾಜ್ಯದ ಕರಾವಳಿ ಪ್ರದೇಶದ ಸಾಂಪ್ರದಾಯಿಕ ನಾಡದೋಣಿ ಮೀನುಗಾರರ ಮನವಿಗೆ ಸ್ಪಂದಿಸಿ, ರಾಜ್ಯಕ್ಕೆ ಹೆಚ್ಚುವರಿಯಾಗಿ 30 ಲಕ್ಷ ಲೀಟರ್ ಸೀಮೆ ಎಣ್ಣೆಯನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ ಎಂದು ಕೇಂದ್ರ ಸಚಿವೆ, ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.
ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಸಾಂಪ್ರದಾಯಿಕವಾಗಿ ನಡೆಸಿಕೊಂಡು ಬರುತ್ತಿರುವ ನಾಡದೋಣಿ ಮೀನುಗಾರಿಕೆಗೆ ಹಂಚಿಕೆಯಾಗಿದ್ದ ಸೀಮೆ ಎಣ್ಣೆ ಸಕಾಲದಲ್ಲಿ ಸಿಗುತ್ತಿರಲಿಲ್ಲ. ಅದಕ್ಕಾಗಿ ಈ ಸಮಸ್ಯೆಯ ಬಗ್ಗೆ ಕೇಂದ್ರ ಸರಕಾರದ ಗಮನವನ್ನು ಸೆಳೆಯಲಾಗಿತ್ತು