ಮಂಗಳೂರು, ನ 05 (DaijiworldNews/MS): ಆಟೋ ರಿಕ್ಷಾ ಪ್ರಯಾಣ ದರ ಪರಿಷ್ಕರಣೆಯನ್ನು ದ.ಕ. ಜಿಲ್ಲಾ ಆಟೋ ರಿಕ್ಷಾ ಚಾಲಕ - ಮಾಲಕರ ಸಂಘಗಳ ಸಂಘಗಳ ಒಕ್ಕೂಟ ವಿರೋಧಿಸಿದೆ.
ಅ.27ರಂದು ಜಿಲ್ಲಾಧಿಕಾರಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ , ದರ ಪರಿಷ್ಕರಣೆ ಬಗ್ಗೆ ಚರ್ಚೆ ನಡೆದಿತ್ತು. ಆದರೆ ಆಗ ಕನಿಷ್ಟ ನಿಗದಿತ ದರ 35 ರೂ. ಹಾಗೂ ಅನಂತರದ ಪ್ರತಿ ಕಿ.ಮೀಗೆ 17 ರೂ. ಎಂದು ತಿಳಿಸಿದ್ದರು.
ಅದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದರಿಂದ ಮುಂದಿನ ಸಭೆಯಲ್ಲಿ ದರ ಪರಿಷ್ಕರಣೆ ಬಗ್ಗೆಚರ್ಚೆ ಮಾಡುವುದಾಗಿ ಅಧಿಕಾರಿಗಳು ತಿಳಿಸಿದ್ದರು. ಅನಂತರ ಯಾವುದೇ ಸಭೆ ನಡೆಸದೇ ಏಕಾಏಕಿಯಾಗಿ ದರ ಪರಿಷ್ಕರಣೆ ಮಾಡಲಾಗಿದೆ ಎಂದು ಒಕ್ಕೂಟ ತಿಳಿಸಿದೆ.
ಜಿಲ್ಲಾ ಪ್ರಾದೇಶಿಕ ಸಾರಿಗೆ ಪ್ರಾಧಿಕಾರ 1.5 ಕಿ.ಮೀ. ವ್ಯಾಪ್ತಿಗೆ ಕನಿಷ್ಠ ದರ 35 ರೂ. (ಗರಿಷ್ಠ ಮೂವರು ಪ್ರಯಾಣಿಕರು), ಅನಂತರ ಪ್ರತೀ ಕಿ.ಮೀ.ಗೆ 17 ರೂ. ನಿಗದಿಪಡಿಸಲಾಗಿದ್ದು, ಕಾಯುವಿಕೆ ಮೊದಲ 15 ನಿಮಿಷ ಉಚಿತ. ನಂತರದ 15 ನಿಮಿಷದವರೆಗೆ 5 ರೂ. ನಿಗದಿಪಡಿಸಿದೆ.