ಕುಂದಾಪುರ, ನ 06 (DaijiworldNews/HR): ಬೈಂದೂರು ಶಾಸಕ ಸುಕುಮಾರ್ ಶೆಟ್ಟಿ ಅವರ ಬಗ್ಗೆ ವಾಟ್ಸ್ಆ್ಯಪ್ ಗ್ರೂಪ್ನಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿರುವ ಆರೋಪದ ಮೇಲೆ ಅಂಪಾರು ಗ್ರಾಮದ ಸತೀಶ್ ಶೆಟ್ಟಿ ಹದಲಿ ವಿರುದ್ಧ ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆರೋಪಿಯನ್ನು ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದು, ಆರೋಪಿಯು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದು, ನ್ಯಾಯಾಲಯ ಆತನಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಆರೋಪಿ ಪರ ಹಂದಕುಂದ ಅಶೋಕ್ ಶೆಟ್ಟಿ ವಾದ ಮಂಡಿಸಿದ್ದರು.