ಉಳ್ಳಾಲ, ನ 08(DaijiworldNews/MS): ತಲಪಾಡಿ ಆರ್ಟಿಒ ಕಚೇರಿಗೆ ಲೋಕಾಯುಕ್ತ ಎಸ್.ಪಿ ಲಕ್ಷ್ಮೀ ಗಣೇಶ್ ನೇತೃತ್ವದ ತಂಡ ದಾಳಿ ನಡೆಸಿದ್ದು, ಸತತ ಮೂರು ಗಂಟೆಗಳಿಗೂ ಹೆಚ್ಚು ಕಾಲ ದಾಖಲೆಗಳನ್ನು ಪರಿಶೀಲಿಸಿದೆ.
ಕೇರಳ - ಕರ್ನಾಟಕ ಗಡಿಭಾಗದ ಮೇಲಿನ ತಲಪಾಡಿಯಲ್ಲಿರುವ ಸಹಾಯಕ ಪ್ರಾದೇಶಿಕ ಸಾರಿಗೆ ಕಚೇರಿ, ತಲಪಾಡಿ ತನಿಖಾ ಠಾಣೆಯಲ್ಲಿ ತನಿಖೆ ನಡೆದಿದೆ.
ಕೇರಳ-ಮಂಗಳೂರು ಮಧ್ಯೆ ಸಂಚರಿಸುತ್ತಿರುವ ಲಾರಿಗಳನ್ನು ತಪಾಸಣೆ ನೆಪದಲ್ಲಿ ತಡೆದು ನಿಲ್ಲಿಸಿ ಲಂಚಕ್ಕಾಗಿ ಪೀಡಿಸುತ್ತಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ತಲಪಾಡಿ ಆರ್ಟಿಒ ಕಚೇರಿಗೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಸೋಮವಾರ ಸಂಜೆ 7 ಗಂಟೆಯ ಸುಮಾರಿಗೆ ತನಿಖಾ ತಂಡ ಆಗಮಿಸಿದ್ದು, ರಾತ್ರಿ 11 ರವರೆಗೂ ಚೆಕ್ ಪೋಸ್ಟ್ ಒಳಗೆ ದಾಖಲೆಗಳನ್ನು ಶೋಧಿಸಿದ್ದಾರೆ. ಲಾರಿ ಚಾಲಕರಿಂದ ಆರ್ಟಿಒ ಸಿಬ್ಬಂದಿ ಲಂಚ ಪಡೆಯುವ ಕುರಿತು ಸಾರ್ವಜನಿಕರು ದೂರು ನೀಡಿದ್ದರು.