ಬಂಟ್ವಾಳ, ನ 08 (DaijiworldNews/SM): ಯುವಕನೋರ್ವನ ಕೊಲೆಗೆ ಸಂಬಂಧಿಸಿದಂತೆ ವಿಟ್ಲ ಪೊಲೀಸರು ವ್ಯಕ್ತಿಯೋರ್ವನ ನ್ನು ಬಂಧಿಸಿದ್ದಾರೆ. ಬೊಳಂತೂರು ನಿವಾಸಿ ಅದ್ದು ಯಾನೆ ಅದ್ರಾಮ ಬಂಧಿತ ಆರೋಪಿ. ಸುರಿಬೈಲು ನಿವಾಸಿ ಸುಲೈಮಾನ್ ಅವರ ಪುತ್ರ ಅಬ್ದುಲ್ ಸಮಾದ್ ಕೊಲೆಯಾದ ಯುವಕ ಎಂದು ಅಂದಾಜಿಸಲಾಗಿದೆ.
ಘಟನೆಯ ವಿವರ
ಪೆಟ್ರೋಲ್ ಸುರಿದು ಯುವಕನನ್ನು ಕೊಲೆ ಮಾಡಿದ್ದೇನೆ ಎಂದು ಹೇಳಿದ್ದ ವ್ಯಕ್ತಿಯೋರ್ವನನ್ನು ವಿಟ್ಲ ಪೋಲೀಸರು ಬಂಧಿಸಿ ವಿಚಾರಣೆ ನಡೆಸಿದಾಗ ಕೊಲೆ ಮಾಡಿದ ಮಾಹಿತಿ ಲಭ್ಯವಾಗಿದೆ. ಆ ಆದಾರದ ಮೇಲೆ ವಿಟ್ಲ ಪೋಲಿಸರು ಕೊಲೆ ಪ್ರಕರಣ ದಾಖಲಿಸಿ ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.
ರವಿವಾರ ರಾತ್ರಿ ಯುವಕನೋರ್ವನನ್ನು ಕಿಡ್ನಾಪ್ ಮಾಡಿ ಬಳಿಕ ಕೊಲೆ ಮಾಡಲಾಗಿದೆ ಎಂಬ ಸುದ್ದಿ ಸೋಮವಾರ ಬೆಳಿಗ್ಗೆಯಿಂದ ಹರಡಿತ್ತು. ಇದು ವದಂತಿಯೋ ಅಥವಾ ಸತ್ಯ ವಿಚಾರ ವೋ ಎಂದು ಗೊತ್ತಿಲ್ಲದೆ ಪೋಲೀಸರು ಸೋಮವಾರ ಬೆಳಿಗ್ಗೆ ಯಿಂದ ತಲೆಕೆಡಿಸಿಕೊಂಡಿದ್ದರು. ಆದರೆ ಈ ಬಗ್ಗೆ ಕೋಣಾಜೆ ಪೋಲಿಸರು, ವಿಟ್ಲ ಪೋಲೀಸರು ಹಾಗೂ ಬಂಟ್ವಾಳ ಗ್ರಾಮಾಂತರ ಪೋಲೀಸರು ತಲೆಕೆಡಿಸಿಕೊಂಡಿದ್ದು, ಹೇಳಿಕೆ ನೀಡಿದ ವ್ಯಕ್ತಿಗಾಗಿ ಬಲೆ ಬೀಸಿದ್ದರು.
ಕೊನೆಗೂ ಕೊಲೆ ಮಾಡಿದ್ದೇನೆ ಎಂದು ಹೇಳಿದ್ದ ವ್ಯಕ್ತಿ ಬೋಳಂತರೂ ನಿವಾಸಿ ಎಂಬ ಮಾಹಿತಿ ಆಧಾರದ ಮೇಲೆ ವ್ಯಕ್ತಿಯೋರ್ವನನ್ನು ವಿಟ್ಲ ಪೋಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.ಬೊಳಂತರು ನಿವಾಸಿ ಅದ್ದು ಯಾನೆ ಅದ್ರಾಮ ಎಂದು ಹೇಳಲಾಗುತ್ತಿದ್ದು ಆತನನ್ನು ಪೋಲೀಸರು ವಶಕ್ಕೆ ಪಡೆದುಕೊಂಡು ಬಳಿಕ ವಿಚಾರಣೆಯ ವೇಳೆ ಆತ ಕೊಲೆ ಮಾಡಿದ ಬಗ್ಗೆ ತಪ್ಪೊಪ್ಪಿಕೊಂಡಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ.
ಕಳೆದ ಎರಡು ದಿನಗಳಿಂದ ಬೊಳಂತೂರು ನಿವಾಸಿ ಯುವಕನೋರ್ವ ನಾಪತ್ತೆಯಾಗಿದ್ದಾನೆ ಎಂಬ ದೂರು ಕೇಳಿಬಂದಿದ್ದು, ಅ ಯುವಕನನ್ನೇ ಕೊಲೆ ಮಾಡಲಾಗಿದೆಯಾ ಎಂಬುದು ಇನ್ನಷ್ಟೇ ತಿಳಿಯಬೇಕಾಗಿದೆ. ಇರಾ ಪದವು ಎಂಬಲ್ಲಿ ಕೊಲೆ ಮಾಡಲಾಗಿದೆ ಎಂಬ ವದಂತಿಗಳು ಹಬ್ಬಿತ್ತು.
ಪೋಲೀಸರು ಆತನ ಹೇಳಿಕೆಯಂತೆ ಸ್ಥಳದಲ್ಲಿ ಬಂದು ನೋಡಿದಾಗ ಸುಮಾರು ಆಳದಲ್ಲಿ ಶವವೊಂದು ಪತ್ತೆಯಾಗಿದೆ. ರಾತ್ರಿಯಾದ ಕಾರಣಕ್ಕಾಗಿ ಶವವನ್ನು ಮೇಲಕ್ಕೆತ್ತಲು ಸಾಧ್ಯ ವಾಗುವುದಿಲ್ಲ ಎಂದು ಅಲ್ಲಿ ನಾಲ್ಕು ಜನ ಪೋಲೀಸರನ್ನು ಕಾವಲಿರಿಸಲಾಗಿದೆ. ನಾಳೆ ಪೊಲೀಸರು ಶವದ ಮರಣೋತ್ತರ ಪರೀಕ್ಷೆ ನಡೆಸಲಾಗುತ್ತದೆ ಎಂಬ ಮಾಹಿತಿ ಲಭ್ಯವಾಗಿದೆ.
ಸ್ಥಳಕ್ಕೆ ಎಸ್.ಪಿ.ಹೃಷಿಕೇಶ್ ಸೋನಾವಣೆ,ಬಂಟ್ವಾಳ ಡಿ.ವೈ.ಎಸ್.ಪಿ.ಪ್ರತಾಪ್ ಸಿಂಗ್ ಥೋರಾಟ್, ಗ್ರಾಮಾಂತರ ಪೋಲೀಸ್ ಇನ್ಸ್ ಪೆಕ್ಟರ್ ಟಿ.ಡಿ.ನಾಗರಾಜ್, ವಿಟ್ಲ ಪೋಲೀಸ್ ಇನ್ಸ್ ಪೆಕ್ಟರ್ ನಾಗರಾಜ್ ಎಚ್ ಹಾಗೂ ಇತರ ಅಧಿಕಾರಿಗಳು ಬೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.