ಬಂಟ್ವಾಳ, ನ. 09 (DaijiworldNews/SM) : ಬಂಟ್ವಾಳ ಬೈಪಾಸ್ ಬಳಿ ರಿಕ್ಷಾ ನಿಲ್ದಾಣ ಹಾಗೂ ಬಸ್ ನಿಲ್ದಾಣದ ವಿಚಾರದಲ್ಲಿ ಎರಡು ಪ್ರಮುಖ ಪಕ್ಷಗಳ ಮುಖಂಡರು ಹಾಗೂ ಕಾರ್ಯಕರ್ತರ ನಡುವೆ ವಾಕ್ಸಮರ ನಡೆದ ಘಟನೆ ನಡೆದಿದೆ.
ಬಂಟ್ವಾಳ ಬೈಪಾಸ್ ನಲ್ಲಿ ಹೆದ್ದಾರಿ ಪ್ರಾಧಿಕಾರದ ವತಿಯಿಂದ ಪ್ರಯಾಣಿಕರ ಉಪಯೋಗಕ್ಕಾಗಿ ಬಸ್ ತಂಗುದಾನ ನಿರ್ಮಾಣಗೊಂಡಿದ್ದು, ಇದರ ಪಕ್ಕದಲ್ಲೆ ರಿಕ್ಷಾ ಪಾರ್ಕ್ ಒಂದನ್ನು ನಿರ್ಮಾಣಕ್ಕೆ ಮುಂದಾಗಿದ್ದರು. ಈ ವಿಚಾರವಾಗಿ ಪ್ರಮುಖ ಪಕ್ಷಗಳಾದ ಬಿಜೆಪಿ ಹಾಗೂ ಕಾಂಗ್ರೇಸ್ ಮುಖಂಡರು ಹಾಗೂ ಕಾರ್ಯಕರ್ತ ರ ನಡುವೆ ಮಾತಿಗೆ ಮಾತು ಬೆಳೆದು ಒಬ್ಬರನೊಬ್ನರು ನಿಂದಿಸಿದ್ದು, ಪರಿಸ್ಥಿತಿ ವಿಕೋಪಕ್ಕೆ ಸಾಗುವ ಹಂತಕ್ಕೇರಿತ್ತು.
ಈ ಸಂದರ್ಭದಲ್ಲಿ ಮಧ್ಯೆ ಪ್ರವೇಶ ಮಾಡಿದ ಬಂಟ್ವಾಳ ನಗರ ಠಾಣಾ ಎಸ್.ಐ. ಅವಿನಾಶ್ ಅವರು ಪರಿಸ್ಥಿತಿ ತಿಳಿಗೊಳಿಸಲು ಪ್ರಯತ್ನಸಿ ಎರಡೂ ಕಡೆಯ ನಾಯಕರು ಹಾಗೂ ಕಾರ್ಯಕರ್ತರನ್ನು ಸಮಾಧಾನ ಪಡಿಸಿದರು.