ಹೆಬ್ರಿ, ನ 11 (DaijiworldNews/SM): ಆಶ್ರಮ ಶಾಲೆಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿ ನಾಲ್ವರು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ತಾಲೂಕಿನಲ್ಲಿ ತಡವಾಗಿ ಬೆಳಕಿಗೆ ಬಂದಿದೆ.
ಇಲ್ಲಿನ ವಾಲ್ಮೀಕಿ ಆಶ್ರಮ ಶಾಲೆಯಲ್ಲಿ ಅವಘಡ ಸಂಭವಿಸಿದ್ದು, ಗಾಯಗೊಂಡ ನಾಲ್ವರು ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಮುಂದುವರೆಸಲಾಗಿದೆ. ಹಾಸ್ಟೆಲ್ ನ ಹಿಂಭಾಗದಲ್ಲಿದ್ದ ತ್ಯಾಜ್ಯಕ್ಕೆ ಬೆಂಕಿ ಹಚ್ಚಲಾಗಿದ್ದು, ಇದುವೇ ಅವಘಡಕ್ಕೆ ಕಾರಣ ಎಂದು ವರದಿಯಾಗಿದೆ.
ನಾಲ್ಕನೇ ತರಗತಿಯ ನಾಲ್ವರು ವಿದ್ಯಾರ್ಥಿಗಳು ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ. ಮೂವರು ವಿದ್ಯಾರ್ಥಿಗಳು ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಹಾಗೂ ಓರ್ವ ವಿದ್ಯಾರ್ಥಿ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೆಲ್ನೋಟಕ್ಕೆ ಆಶ್ರಮ ಶಾಲೆಯ ಆಡಳಿತ ವರ್ಗದವರ ನಿರ್ಲಕ್ಷ ಎದ್ದು ಕಾಣುತ್ತಿದೆ.
ಈ ಕುರಿತಂತೆ ಹೆಬ್ರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.