ಮಂಗಳೂರು, ನ 12 (DaijiworldNews/MS): ಬಂಗಾಲ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನಲೆಯಲ್ಲಿ ರಾಜ್ಯ ರಾಜಧಾನಿ ಸೇರಿದಂತೆ ಹಲವು ಜಿಲ್ಲೆಯಲ್ಲಿ ನ.14ರವರೆಗೆ ಮಳೆಯಾಗುವ ಸಾಧ್ಯತೆ ಇದೆ.
ನ. 14ರಂದು ಕರಾವಳಿಯ ಉಡುಪಿ, ಮಂಗಳೂರು, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಗಳಿದ್ದು, ಹೀಗಾಗಿ ಎಲ್ಲೋ ಅಲರ್ಟ್ ಘೋಷಿಸಲಾಗಿದೆ. ಇನ್ನು ನ..೧೨ರ ಶನಿವಾರ ಮುಂಜಾನೆ ಮಂಗಳೂರು ನಗರದಲ್ಲಿ ತುಂತುರು ಮಳೆಯಾಗಿದ್ದು, ಮೋಡ ಕವಿದ ವಾತಾವರಣವಿದೆ.
ಮುಂದಿನ 24 ಗಂಟೆಗಳು ದಕ್ಷಿಣ ಒಳನಾಡಿನ ಕೆಲವೆಡೆ ಹಗುರದಿಂದ ಸಾಧಾರಣ ಮಳೆ ಯಾಗುವ ಹಾಗೂ ಕರಾವಳಿಯ ಒಂದೆರಡು ಕಡೆ ಹಗುರ ಮಳೆಯಾಗುವ ಸಾಧ್ಯತೆಗಳಿವೆ.