ಕಾರ್ಕಳ, ನ 12 (DaijiworldNews/DB): ಜಾಂಬೂರಿ ವಿಶ್ವ ಮಟ್ಟದ ಸಾಂಸ್ಕೃತಿಕ ಕಾರ್ಯಕ್ರಮ. ವಿಶ್ವ ದರ್ಶನವಾಗುವ ರೀತಿಯಲ್ಲಿ ಜಾಂಬೂರಿ ಉತ್ಸವ ಯಶಸ್ವಿಯಾಗಿ ನಡೆಯಬೇಕು ಎಂದು ಇಂಧನ ಸಚಿವ ವಿ. ಸುನಿಲ್ಕುಮಾರ್ ಹೇಳಿದ್ದಾರೆ.
ಕಾರ್ಕಳದ ಶ್ರೀ ಭಗವಾನ್ ಬಾಹುಬಲಿ ಪ್ರವಚನ ಮಂದಿರದಲ್ಲಿ ಶನಿವಾರ ನಡೆದ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ಜಿಲ್ಲಾ ಸಂಸ್ಥೆ ಉಡುಪಿ, ಸ್ಥಳಿಯ ಸಂಘ ಕಾರ್ಕಳ ಇದರ ವಿಶ್ವ ಸಾಂಸ್ಕೃತಿಕ ಜಾಂಬೂರಿಯ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಉತ್ಸವಕ್ಕೆ ಸರಕಾರದಿಂದ ಸರ್ವ ರೀತಿಯ ನೆರವು ನೀಡಲಾಗುವುದು. ಎಲ್ಲ ಸಂಘ ಸಂಸ್ಥೆಗಳ ನೆರವು ಇದಕ್ಕೆ ಅಗತ್ಯ ಎಂದರು.
ಮೂಡುಬಿದಿರೆ ಆಳ್ವಾಸ್ ಸಮೂಹ ಸಂಸ್ಥೆಗಳ ಅಧ್ಯಕ್ಷ ಡಾ| ಮೋಹನ್ ಆಳ್ವ ಮಾತನಾಡಿ, ರಾಜ್ಯ, ದೇಶ, ಅಂತಾರಾಷ್ಟ್ರೀಯ ಮಟ್ಟದ ಅಡಿಯಲ್ಲಿ ನಡೆಯುವ ಕಾರ್ಯಕ್ರಮವೇ ಜಾಂಬೂರಿಯಾಗಿದೆ. ನಮ್ಮ ದೇಶದಲ್ಲಿ ಈವರೆಗೆ ದೇಶಿಯ ಮಟ್ಟದ ಜಾಂಬೂರಿ ಹದಿನೈದು ಬಾರಿ ನಡೆದರೆ, ಕರ್ನಾಟಕದಲ್ಲಿ 3 ಬಾರಿ ಜಾಂಬೂರಿ ನಡೆಸಲಾಯಿತು. ಆದರೆ ಈವರೆಗೆ ಒಂದು ಬಾರಿಯೂ ವಿಶ್ವ ಮಟ್ಟದ ಜಾಂಬೂರಿ ನಡೆಯಲಿಲ್ಲ. ಇದೇ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಮಟ್ಟದ ಕಲ್ಚರಲ್ ಜಾಂಬೂರಿ ಎಂಬ ಹೆಸರಿನಲ್ಲಿ ನಡೆಸಲಾಗುತ್ತಿದೆ ಎಂದು ತಿಳಿಸಿದರು.
ಕಾರ್ಕಳ ಸ್ಕೌಟ್ಸ್, ಗೈಡ್ಸ್ ಘಟಕದ ಅಧ್ಯಕ್ಷ ಎಂ.ಕೆ. ವಿಜಯಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಉಡುಪಿ ಜಿಲ್ಲಾ ಗೈಡ್ ಆಯುಕ್ತೆ ಜೆ. ಜ್ಯೋತಿ ಪೈ, ಮಂಗಳೂರು ವಿಶ್ವವಿದ್ಯಾನಿಲಯ ಸಿಂಡಿಕೇಟ್ ಸದಸ್ಯ ಮೋಹನ್ ಪಡಿವಾಳ್, ಪುರಸಭೆ ಅಧ್ಯಕ್ಷೆ ಸುಮಾ ಕೇಶವ್, ಮುಖ್ಯಾಧಿಕಾರಿ ರೂಪಾ ಟಿ. ಶೆಟ್ಟಿ, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪ್ರಭಾಕರ ಶೆಟ್ಟಿ ಕೊಂಡಳ್ಳಿ, ಅಂಡಾರು ಮಹಾವೀರ ಹೆಗ್ಡೆ, ಹೆಬ್ರಿ ತಹಶೀಲ್ದಾರ್ ಪುರಂದರ, ಹೆಬ್ರಿ ತಾಪಂ ಇಒ ಶಶಿಧರ್, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕಾರ್ಯದರ್ಶಿ ಸಂಜೀವ ಪೂಜಾರಿ, ಪ್ರಾ. ಶಾಲಾ ಸಹ ಶಿಕ್ಷಕಕರ ಸಂಘದ ತಾಲೂಕು ಅಧ್ಯಕ್ಷ ರಮಾನಂದ, ತಾಲೂಕು ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಆನಂದ ಪೂಜಾರಿ, ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಪೃಥ್ವಿರಾಜ್ ಬಲ್ಲಾಳ್, ಉಡುಪಿ ಜಿಲ್ಲಾ ಗೈಡ್ ತರಬೇತಿ ಆಯುಕ್ತೆ ಸಾವಿತ್ರಿ ಮನೋಹರ್, ಕಾರ್ಕಳ ಸ್ಕೌಟ್, ಗೈಡ್ ಉಪಾಧ್ಯಕ್ಷ ಜಗದೀಶ್ ಹೆಗ್ಡೆ, ವಿಜಯ ಶೆಟ್ಟಿ ಮತ್ತಿತರರು ಭಾಗವಹಿಸಿದ್ದರು. ಗಣೇಶ್ ಜಾಲ್ಸೂರು ನಿರೂಪಿಸಿದರು.