ಕಾಸರಗೋಡು, ನ 12 (DaijiworldNews/SM): ಬದಿಯಡ್ಕದ ದಂತ ವೈದ್ಯ ಡಾ. ಎಸ್. ಕೃಷ್ಣಮೂರ್ತಿಯವರ ನಿಗೂಡ ಸಾವಿನ ಕುರಿತು ಸಮಗ್ರ ತನಿಖೆ ನಡೆಸಬೇಕು ಎಂದು ಕರ್ನಾಟಕ ಗೃಹ ಸಚಿವ ಅರಗ ಜ್ಞಾನೇಂದ್ರರಿಗೆ ಕುಟುಂಬಸ್ಥರು ಮನವಿ ಸಲ್ಲಿಸಿದರು.
ಮಂಗಳೂರಿಗೆ ಆಗಮಿಸಿದ್ದ ಅರಗ ಜ್ಞಾನೇಂದ್ರ ಅವರನ್ನು ಬೇಟಿಯಾಗಿ ಮನವಿ ಸಲ್ಲಿಸಲಾಯಿತು. ಡಾ.ಕೃಷ್ಣಮೂರ್ತಿ ಅವರ ಪುತ್ರಿ ಡಾ.ವರ್ಷ, ಶಾಸಕರುಗಳಾದ ಭರತ್ ಶೆಟ್ಟಿ, ವೇದವ್ಯಾಸ ಕಾಮತ್,ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷ ಸುದರ್ಶನ, ವಿಶ್ವ ಹಿಂದು ಪರಿಷತ್ ರಾಜ್ಯ ಕಾರ್ಯದರ್ಶಿ ಶರಣ್ ಪಂಪ್ ವೆಲ್, ಬಿಜೆಪಿ ಬದಿಯಡ್ಕ ಮಂಡಲ ಅಧ್ಯಕ್ಷ ಹರೀಶ್ ನಾರಂಪಾಡಿ, ವಿಶ್ವ ಹಿಂದು ಪರಿಷತ್ ಕಾರ್ಯದರ್ಶಿ ಮಂಜುನಾಥ ಮಾನ್ಯ, ಭಜರಂಗದಳ ಸಂಯೋಜನ ರಂಜಿತ್,ವಿಹಿಂಪ ಸತ್ಸಂಗ ಪ್ರಮುಖ ರೋಹಿತಾಕ್ಷ ಬದಿಯಡ್ಕ ಮೊದಲಾದವರು ಉಪಸ್ಥಿತರಿದ್ದರು. ಡಾ.ಕೃಷ್ಣಮೂರ್ತಿ ಅವರನ್ನು ಕೊಲೆ ಮಾಡಲಾಗಿದೆ ಎಂಬ ಸಂಶಯ ಉಂಟಾಗಿದ್ದು, ಈ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಎಂದು ಒತ್ತಾಯಿಸಲಾಯಿತು.
ಈ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ದ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವರು ಭರವಸೆ ನೀಡಿದರು.