https://daijiworld.ap-
south-1.linodeobjects.com/
Linode/img_tv247/Santu-death.
jpg>
ಕಾಸರಗೋಡಿನ ಬಡಿಯಡ್ಕದಲ್ಲಿ ಕಳೆದ ಮೂರು ದಶಕಗಳಿಂದ ದಂತ ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದು ಕಳೆದ ಕೆಲ ದಿನಗಳಿಂದ ಡಾ. ಕೃಷ್ಣ ಮೂರ್ತಿಯವರು ನಾಪತ್ತೆಯಾಗಿದ್ದರು. ಇದೀಗ ಅವರ ಶವವೂ ಉಡುಪಿ ಜಿಲ್ಲೆಯ ಕುಂದಾಪುರದ ಹಳಿಯಲ್ಲಿ ಪತ್ತೆಯಾಗಿತ್ತು. ಇದೊಂದು ವ್ಯವಸ್ಥಿತ ಸಂಚಾಗಿದೆ. ಈಗಾಗಲೇ ಕೇರಳ ಕಾಸರಗೋಡಿನ ಬದಿಯಡ್ಕದಲ್ಲಿ ದೂರು ದಾಖಲಾಗಿ ತನಿಖೆ ನಡೆಯತ್ತಿದ್ದು ಈ ತನಿಖೆಯಲ್ಲಿ ವಿಶ್ವಾಸವಿಲ್ಲ. ಆದ್ದರಿಂದ ಅವರ ಶವ ದೊರೆತ ಕರ್ನಾಟಕದ ಉಡುಪಿ ಕುಂದಾಪುರದಲ್ಲಿ ಪ್ರಕರಣ ದಾಖಲು ಮಾಡಿ ಉನ್ನತ ತನಿಖೆ ನಡೆಸುವಂತೆ ಮನವಿ ಮಾಡಿದ್ದಾರೆ.
ಈ ಪ್ರಕರಣ ಸಂಬಂಧ ಪೊಲೀಸರು ಈಗಾಗಲೇ ಐವರನ್ನು ವಶಕ್ಕೆ ಪಡೆದಿದ್ದಾರೆ. ಮಂಗಳೂರು ಗಡಿ ಭಾಗದ ಕೇರಳದ ಕಾಸರಗೋಡು ಜಿಲ್ಲೆಯ ಬದಿಯಡ್ಕದಲ್ಲಿ ಕಳೆದ 30 ವರ್ಷಗಳಿಂದ ದಂತ ವೈದ್ಯರಾಗಿದ್ದ ಡಾ.ಕೃಷ್ಣಮೂರ್ತಿ ಅವರು ನವೆಂಬರ್ 8 ರಂದು ನಾಪತ್ತೆಯಾಗಿದ್ದರು. ಬಳಿಕ ನ.10ರಂದು ಉಡುಪಿ ಜಿಲ್ಲೆ ಕುಂದಾಪುರದ ಹಟ್ಟಿಯಂಗಡಿ ಬಳಿಯ ರೈಲ್ವೇ ಹಳಿಯಲ್ಲಿ ಶವವಾಗಿ ಪತ್ತೆಯಾಗಿದ್ರು. ಕಳೆದ ಆರು ತಿಂಗಳಿನಿಂದ ಜಾಗದ ವಿಚಾರದಲ್ಲಿ ಡಾ.ಕೃಷ್ಣಮೂರ್ತಿ ಅವರು ಲ್ಯಾಂಡ್ ಮಾಫಿಯಾದಲ್ಲಿ ಸಿಲುಕಿಕೊಂಡಿದ್ದರು. ಜಾಗ ಖರೀದಿ ವಿಚಾರದಲ್ಲಿ ಡಾ.ಕೃಷ್ಣಮೂರ್ತಿಗೆ ಸ್ಥಳೀಯ ಕೆಲ ಮುಸ್ಲಿಂ ಸಂಘಟನೆಯ ನಾಯಕರು ಕಿರುಕುಳ ನೀಡಿರುವ ಆರೋಪ ಕೇಳಿ ಬಂದಿದೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಕೃಷ್ಣಮೂರ್ತಿಯವರ ಹತ್ಯೆ ನಡೆದಿದೆ ಎಂದು ಹೇಳಲಾಗಿದ್ದು, ಪೊಲೀಸರು ತನಿಖೆಯನ್ನು ಮುನ್ನಡೆಸಿದ್ದಾರೆ.