ಮಂಗಳೂರು, ನ 14 (DaijiworldNews/HR): ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಹುಲಿಗಳ ಮಧ್ಯ ನಡೆದ ಕಚ್ಚಾಟದಲ್ಲಿ ಗಾಯಗೊಂಡಿದ್ದ ಎರಡೂವರೆ ವರ್ಷ ಪ್ರಾಯದ ಹುಲಿಮರಿ ಸಾವನ್ನಪ್ಪಿರುವ ಘಟನೆ ವರದಿಯಾಗಿದೆ.
ಸಾಂದರ್ಭಿಕ ಚಿತ್ರ
ಕೆಲವು ದಿನಗಳ ಹಿಂದೆ ಹುಲಿಗಳ ನಡುವಿನ ಕಚ್ಚಾಟದಲ್ಲಿ ಗಾಯಗೊಂಡಿದ್ದ ಹುಲಿಮರಿಗೆ ಜೈವಿಕ ಉದ್ಯಾನವನದ ವೈದ್ಯಾಧಿಕಾರಿ ಡಾ.ವಿಷ್ಣು ದತ್, ಡಾ.ಮಧುಸೂದನ ಮತ್ತು ಡಾ.ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿದ್ದು, ಅದು ಚೇತರಿಸಿಕೊಂಡು ಸಹಜ ಸ್ಥಿತಿಗೆ ಮರಳಿತ್ತು. ಆದರೆ ಹುಲಿಯ ಆರೋಗ್ಯದಲ್ಲಿ ಮತ್ತೆ ಏರುಪೇರು ಉಂಟಾಗಿ ಸಾವನ್ನಪ್ಪಿದೆ.
ಇನ್ನು ಸಾವನ್ನಪ್ಪಿದ ಹುಲಿ ಮರಿಯ ಮರೋಣತ್ತರ ಪರೀಕ್ಷೆ ನಡೆಸಲಾಗಿದ್ದು, ಈ ವೇಳೆ ಕಿಡ್ನಿ ಮತ್ತು ಅಂಗಾಂಗಳ ವೈಫಲ್ಯ ಕಂಡು ಬಂದಿದೆ ಎಂದು ಉದ್ಯಾನವನದ ವೈದ್ಯಾಧಿಕಾರಿ ಡಾ. ವಿಷ್ಣು ದತ್ ತಿಳಿಸಿದ್ದಾರೆ.