ಉಡುಪಿ, ನ 14 (DaijiworldNews/HR): ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಡಿ ಕೆ ಶಿವಕುಮಾರ್ ಅವರ ಸೂಚನೆಯಂತೆ ಕಾಂಗ್ರೆಸ್ ಪಕ್ಷದಿಂದ 2023ರ ಕರ್ನಾಟಕ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ಉಡುಪಿ ವಿಧಾನಸಭಾ ಕ್ಷೇತ್ರದಿಂದ. ಉಡುಪಿ ಬ್ಲಾಕ್ ಕಾಂಗ್ರಸ್ ಅಧ್ಯಕ್ಷರಾದ ರಮೇಶ್ ಕಾಂಚನ್ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಚೇರಿಯಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಆಕಾಂಕ್ಷಿಯಾಗಿ ಸ್ಪರ್ಧಿಸುವ ಆಕಾಂಕ್ಷೆ ಇದ್ದು ಅದರಂತೆ ಪಕ್ಷದ ಹಿರಿಯ, ಕಿರಿಯ ನಾಯಕರು ಹಾಗೂ ಹಿತೈಷಿಗಳ ಸಮ್ಮತಿ ಪಡೆದು ನ.14 ಸೋಮವಾರದಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಚೇರಿಯಲ್ಲಿ ಅರ್ಜಿ ಸಲ್ಲಿಸಿದರು.
ಕಳೆದ ಹಲವಾರು ವರ್ಷಗಳಿಂದ ರಮೇಶ್ ಕಾಂಚನ್ ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿದ್ದು ಪ್ರಸ್ತುತ ಉಡುಪಿ ನಗರಸಭೆಯ ಬೈಲೂರು ವಾರ್ಡ್ ನ ನಗರಸಭಾ ಸದಸ್ಯರು ಮತ್ತು ವಿರೋಧ ಪಕ್ಷದ ನಾಯಕರಾಗಿದ್ದಾರೆ.
ಈ ಸಂದರ್ಭದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಸಂಯೋಜಕರಾದ ಮುರಳಿ ಶೆಟ್ಟಿ, ಮಾಜಿ ಚಿಕ್ಕಮಂಗಳೂರು ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಡಾ. ವಿಜಯ್ ಕುಮಾರ್, ಮಾಜಿ ಉಡುಪಿ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ವಿಶ್ವಾಸ್ ಅಮೀನ್, ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷರಾದ ಗಣೇಶ್ ದೇವಾಡಿಗ, ಶರತ್ ಶೆಟ್ಟಿ, ಉಡುಪಿ ಕಾಂಗ್ರೆಸ್ ಮುಖಂಡರಾದ ಪ್ರಿತೇಶ್ ಪೂಜಾರಿ ಚಿಟ್ಪಾಡಿ, ಬ್ರಹ್ಮಾವರ ಬ್ಲಾಕ್ ಚಾಂತಾರು ಗ್ರಾಮ ಪಂಚಾಯತ್ ಸದಸ್ಯರಾದ ಸಂದೇಶ್ ಶೆಟ್ಟಿ, ಕಾಂಗ್ರೆಸ್ ಮುಖಂಡರಾದ ರಕ್ಷಿತ್, ರಿತೇಶ್ ಸಾಲ್ಯಾನ್, ಸಂಜಯ್ ಆಚಾರ್ಯ ಹಾಗೂ ಇನ್ನಿತರರು ಉಪಸ್ಥಿತರಿದ್ದರು.