ಮಂಗಳೂರು, ನ 16 (DaijiworldNews/DB): ಕಠಿಣ ಪರಿಶ್ರಮದ ಮೂಲಕ ಅತ್ಯುತ್ತಮ ಸಾಧನೆ ಮಾಡಲು ಆಟೋಟ ಸ್ಪರ್ಧೆಗಳು ಪ್ರೇರಣೆ ನೀಡುತ್ತದೆ ಎಂದು ಅಂತಾರಾಷ್ಟ್ರೀಯ ಕ್ರೀಡಾಪಟು ವಿಕಾಸ್ ಪುತ್ರನ್ ಅಭಿಪ್ರಾಯಪಟ್ಟಿದ್ದಾರೆ.
ವಳಚ್ಚಿಲ್ ಎಕ್ಸ್ಪರ್ಟ್ ಪದವಿ ಪೂರ್ವ ಕಾಲೇಜಿನ ವಾರ್ಷಿಕ ಕ್ರೀಡಾಕೂಟದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಕ್ರೀಡೆಯಿಂದ ಬದುಕು ಭವ್ಯವಾಗುತ್ತದೆ. ದೈಹಿಕ, ಮಾನಸಿಕ ಆರೋಗ್ಯಕ್ಕೆ ಕ್ರೀಡೆ ಪೂರಕ. ಕ್ರೀಡೆಯಿಂದ ವಿದ್ಯಾರ್ಥಿಗಳಲ್ಲಿ ಸರ್ವತೋಮುಖ ವ್ಯಕ್ತಿತ್ವ ವಿಕಾಸವಾಗುತ್ತದೆ ಎಂದವರು ತಿಳಿಸಿದರು.
ಎಕ್ಸ್ಪರ್ಟ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಪ್ರೊ. ನರೇಂದ್ರ ಎಲ್. ನಾಯಕ್ ಅಧ್ಯಕ್ಷತೆ ವಹಿಸಿದ್ದರು. ಎಕ್ಸ್ಪರ್ಟ್ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷೆ ಡಾ. ಉಷಾಪ್ರಭಾ ಎನ್. ನಾಯಕ್, ಟ್ರಸ್ಟಿ ಉಸ್ತಾದ್ ರಫೀಖ್ ಖಾನ್, ಮಾಹಿತಿ ತಂತ್ರಜ್ಞಾನ ನಿರ್ದೇಶಕ ಅಂಕುಶ್ ಎನ್. ನಾಯಕ್, ವಾಸ್ತು ತಜ್ಞೆ ದೀಪಿಕಾ ಎ. ನಾಯಕ್, ಪ್ರಾಂಶುಪಾಲ ಡಾ. ಎನ್.ಕೆ. ವಿಜಯನ್ ಕರಿಪ್ಪಾಲ್, ಉಪಪ್ರಾಂಶುಪಾಲರಾದ ರಾಘವೇಂದ್ರ ಶೆಣೈ, ಸುಬ್ರಹ್ಮಣ್ಯ ಉಡುಪ, ಕಾರ್ಯಕ್ರಮ ನಿರ್ದೇಶಕ ಹರಿಪ್ರಸಾದ್ ಬಿ. ಉಪಸ್ಥಿತರಿದ್ದರು.
ಕ್ರೀಡಾ ಕಾರ್ಯದರ್ಶಿಗಳಾದ ಪ್ರಜ್ವಲ್ ರೂಡಿಗಿ ಸ್ವಾಗತಿಸಿ, ಸುಕನ್ಯಾ ಗಡದ ವಂದಿಸಿದರು. ಇಂಗ್ಲಿಷ್ ವಿಭಾಗದ ಉಪನ್ಯಾಸಕ ಹರೀಶ್ ನಂಬ್ಯಾರ್ ನಿರೂಪಿಸಿದರು.
ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ನಡೆಯಿತು.