ಮಂಗಳೂರು, ಫೆ 23(SM): ಕದ್ರಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರತ ಪೊಲೀಸ್ ಪೇದೆಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರನ್ನು ಲೋಕನಾಥ್ ಎಂದು ಗುರುತಿಸಲಾಗಿದೆ.
2008ನೇ ಬ್ಯಾಚ್ನ ಪೊಲೀಸ್ ಸಿಬ್ಬಂದಿಯಾಗಿದ್ದ ಇವರು ಮೇರಿಹಿಲ್ನಲ್ಲಿರುವ ತಮ್ಮ ಸ್ವಗೃಹದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದರೆ ಘಟನೆಗೆ ಇನ್ನೂ ಕಾರಣವೇನು ಎಂಬುವುದು ತಿಳಿದು ಬಂದಿಲ್ಲ. ತನ್ನ ಸೇವಾ ಅವಧಿಯಲ್ಲಿ ಲೋಕನಾಥ್ ಉತ್ತಮವಾಗಿ ಕಾರ್ಯವಹಿಸಿದ್ದರು. ಅಲ್ಲದೆ ಎಲ್ಲರೊಂದಿಗೆ ಉತ್ತಮ ಸಂಬಂಧವನ್ನು ಹೊಂದಿದ್ದರು ಎನ್ನಲಾಗಿದೆ.
ಘಟನೆಯ ಕುರಿತಂತೆ ಕದ್ರಿ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.