ಉಡುಪಿ, ನ 18 (DaijiworldNews/SM): ಭಯೋತ್ಪಾದನೆ ನಿಗ್ರಹ ವಿಚಾರದಲ್ಲಿ ಭಾರತ ನಾಯಕತ್ವ ವಹಿಸಿದೆ. ಕಾಲು ಕೆರೆದುಕೊಂಡು ನಾವು ಯಾರ ಜೊತೆಯೂ ತಗಾದೆ ಶುರು ಮಾಡುವುದಿಲ್ಲ. ಭಾರತದ ತಂಟೆಗೆ ಬಂದರೆ ತಕ್ಕ ಉತ್ತರ ನೀಡುತ್ತೇವೆ ಎಂದು ಭಾರತದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಎಚ್ಚರಿಸದ್ದಾರೆ.
ಉಡುಪಿಯಲ್ಲಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು “ಇಡೀ ಪ್ರಪಂಚ ಭಾರತದ ಮಾತು ಕೇಳುವ ಕಾಲ ಬಂದಿದೆ. ಐದು ವರ್ಷದಲ್ಲಿ ವಿಶ್ವದ ಮೂರನೇ ಆರ್ಥಿಕ ದೇಶವಾಗಿ ಭಾರತ ಸದೃಢವಾಗಿ ನಿಲ್ಲಲಿದೆ. ಭಾರತ 2047ಕ್ಕೆ ಪ್ರಪಂಚ ಮೊದಲ ಸ್ಥಾನದಲ್ಲಿ ನಿಲ್ಲಲಿದೆ. ದೇಶವನ್ನು ಐದು ಟ್ರಿಲಿಯನ್ ಆರ್ಥಿಕ ರಾಷ್ಟ್ರ ಮಾಡುವುದು ಪ್ರಧಾನಿ ಮೋದಿ ಕನಸು. ದೇಶದ ಯುವ ಜನಾಂಗ ಇದಕ್ಕೆ ಕೊಡುಗೆ ನೀಡುತ್ತಿದ್ದೇವೆ. ಗ್ಲೋಬಲ್ ಸಿಟಿಜನ್ ನಿರ್ಮಿಸಲು ಎನ್ ಇ ಪಿ ಜಾರಿಗೆ ತಂದಿದ್ದೇವೆ. ಅಂತಾರಾಷ್ಟ್ರೀಯ ಕಂಪನಿ ಸಿಇಒಗಳು ಭಾರತ ಮೂಲದವರು ಎಂಬೂದು ನಮ್ಮ ಹೆಗ್ಗಳಿಕೆ. ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಭಾರತದ ಹಲವಾರು ವರ್ಷಗಳಿಂದ ಸಾಧನೆ ಮಾಡಿಕೊಂಡಿದ್ದೇನೆ. ಈ ಬಗೆಗಿನ ನಮ್ಮ ಅಭಿಮಾನವನ್ನು ಕೆಲವರು ಹೆಚ್ಚುಗಾರಿಕೆ ಎಂದು ಟೀಕಿಸುತ್ರಾರೆ. ಇತಿಹಾಸವನ್ನು ತಿಳಿದುಕೊಳ್ಳದ ವ್ಯಕ್ತಿಗಳು ಇಂತಹ ಟೀಕೆಗಳನ್ನು ಮಾಡುತ್ತಾರೆ. ಭಾರತೀಯರು ಕೊಟ್ಟ ಶೂನ್ಯ ಇರದ ಗಣಿತವನ್ನು ಊಹಿಸಲು ಸಾಧ್ಯವಿಲ್ಲ. ಪೈಥಾಗೋರಸನ ಪ್ರಮೇಯವನ್ನು ಬೋದಾಯನ ಋಷಿ 300 ವರ್ಷಗಳ ಹಿಂದೆಯೇ ಹೇಳಿದ್ದ. ಭಾರತದ ಆರ್ಥಿಕ ಸದೃಢತೆ ಗುಣಮಟ್ಟದ ಮಾನವ ಸಂಪನ್ಮೂಲಗಳಲ್ಲಿ ಇದೆ” ಎಂದವರು ಹೇಳಿದ್ದಾರೆ.