ಮಂಗಳೂರು, ನ 20 (DaijiworldNews/HR): ಮಂಗಳೂರಿನ ನಾಗುರಿ ಬಳಿ ಶನಿವಾರ ಸಂಜೆ ಆಟೋರಿಕ್ಷಾದಲ್ಲಿ ಕುಕ್ಕರ್ ಸ್ಫೋಟ ಸಂಭವಿಸಿದ ಸ್ಫೋಟವು ಹೊಸ ತಿರುವು ಪಡೆದುಕೊಂಡಿದ್ದು, ಪರಿಶೀಲನೆ ವೇಳೆ ಸಂಶಯಾಸ್ಪದ ವಸ್ತುಗಳು ಪತ್ತೆಯಾಗಿದೆ.
ರಿಕ್ಷಾದಲ್ಲಿ ನಟ್, ಬೋಲ್ಟ್, ಬ್ಯಾಟರಿ, ಸರ್ಕಿಟ್ ರೀತಿಯ ವೈರಿಂಗ್ ಇರುವ ವಸ್ತುಗಳು ಪತ್ತೆಯಾಗಿದ್ದು, ಲಘು ತೀವ್ರತೆ ಇರುವ ಸ್ಪೋಟಕ ಬಳಸಿರುವ ಶಂಕೆ ವ್ಯಕ್ತವಾಗಿದೆ.
ಇನ್ನು ವಿಧಿವಿಜ್ಞಾನ ಪ್ರಯೋಗಾಲಯ, ಬಾಂಬ್ ನಿಷ್ಕ್ರೀಯ ದಳದಿಂದ ಪರಿಶೀಲನೆ ನಡೆಯುತ್ತಿದೆ.
ಮಂಗಳೂರು ಜಂಕ್ಷನ್ ರೈಲು ನಿಲ್ದಾಣದಿಂದ ಬರುತ್ತಿದ್ದ ಆಟೋವವನ್ನು ನಾಗುರಿ ಬಳಿ ಪ್ರಯಾಣಿಕ ಹತ್ತಿದ್ದ. ಆಟೋ ಒಂದು ಕಿ.ಮೀ ಕ್ರಮಿಸುವಷ್ಟರಲ್ಲಿ ನಿಗೂಢ ಸ್ಫೋಟಗೊಂಡಿದ್ದು ಹಲವು ಅನುಮಾನಕ್ಕೆ ಕಾರಣವಾಗಿದೆ.
ಆಟೋದಲ್ಲಿ ಎರಡು ಬ್ಯಾಟರಿ, ನಟ್ಟು ಬೋಲ್ಟ್, ಸರ್ಕ್ಯೂಟ್ ರೀತಿಯ ವೈರಿಂಗ್ ಮಾಡಿರುವ ವಸ್ತು ಪತ್ತೆಯಾಗಿದೆ. ಸಿಕ್ಕ ವಸ್ತುಗಳನ್ನು ವಿಧಿ ವಿಜ್ಞಾನ ತಂಡ ಪರೀಕ್ಷೆಗೊಳಪಡಿಸಿದೆ.