ವಿಟ್ಲ, ನ 22 (DaijiworldNews/HR): ವಿಟ್ಲ ಪಟ್ಟಣ ಪಂಚಾಯತ್ ನ ಪೌರ ಕಾರ್ಮಿಕ ದೊಡ್ಡ ಕುಮಾರ (47) ಮೈಸೂರಿನಲ್ಲಿ ಅಪಘಾತದಲ್ಲಿ ಮೃತಪಟ್ಟ ಘಟನೆ ನಡೆದಿದೆ.
ಸೋಮವಾರ ಅವರ ಹುಟ್ಟೂರು ಮೈಸೂರಿನಲ್ಲಿ ನಡೆದ ದ್ವಿಚಕ್ರ ವಾಹನ ಅಪಘಾತದಲ್ಲಿ ಮೃತಪಟ್ಟಿದ್ದಾರೆ.
ಇನ್ನು ವಿಟ್ಲ ಪಂಚಾಯತ್ ವ್ಯಾಪ್ತಿಯಲ್ಲಿ ಸುಮಾರು 10 ವರ್ಷಗಳಿಂದ ಪೌರ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದು, 3 ವರ್ಷಗಳ ಹಿಂದೆ ಖಾಯಂ ಪೌರ ಕಾರ್ಮಿಕರಾಗಿ ಭಡ್ತಿ ಹೊಂದಿದ್ದರು. 2 ವರ್ಷಗಳ ಹಿಂದೆ ಕಟ್ಟಡದಿಂದ ಬಿದ್ದು ಗಾಯಗೊಂಡು ಚೇತರಿಸಿದ್ದರು.