ಬೆಳ್ತಂಗಡಿ, ನ 22 (DaijiworldNews/DB): ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮಂತ್ರಾಲಯ ಮತ್ತು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವೆ ಸ್ಮೃತಿ ಇರಾನಿ ಅವರು ಧರ್ಮಸ್ಥಳ ಶ್ರೀ ಮಂಜುನಾಥ ದೇವರ ಸನ್ನಿಧಿಗೆ ಮಂಗಳವಾರ ಭೇಟಿ ನೀಡಿ ದೇವರ ದರ್ಶನ ಪಡೆದರು.
ಧರ್ಮಸ್ಥಳದಲ್ಲಿ ನಡೆಯುತ್ತಿರುವ ಲಕ್ಷದೀಪೋತ್ಸವ ಪ್ರಯುಕ್ತ ಮಂಗಳವಾರ ಸರ್ವಧರ್ಮ 90ನೇ ಅಧಿವೇಶನದ ಉದ್ಘಾಟನೆಗಾಗಿ ಅವರು ಧರ್ಮಸ್ಥಳಕ್ಕೆ ಆಗಮಿಸಿದ್ದರು. ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂದಿಳಿದು ರಸ್ತೆ ಮಾರ್ಗವಾಗಿ ಕ್ಷೇತ್ರಕ್ಕೆ ತಲುಪಿದರು.
ಕೇಂದ್ರ ಸಚಿವರನ್ನು ಧರ್ಮಸ್ಥಳದಲ್ಲಿ ಡಿ. ಸುರೇಂದ್ರ ಕುಮಾರ್, ಶ್ರದ್ಧಾ ಅಮಿತ್, ಡಿ. ಶ್ರೇಯಸ್ ಕುಮಾರ್, ನೀತಾ ರಾಜೇಂದ್ರ ಕುಮಾರ್ ಮತ್ತು ಎಂಎಲ್ಸಿ ಕೆ. ಪ್ರತಾಪಸಿಂಹ ನಾಯಕ್ ಸ್ವಾಗತಿಸಿದರು.