ಮಂಗಳೂರು, ನ 22 (DaijiworldNews/SM): ನಗರದಲ್ಲಿ ಆಟೋ ರಿಕ್ಷಾದಲ್ಲಿ ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಳೆ ಮಂಗಳೂರಿಗೆ ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಭೇಟಿ ನೀಡಲಿದ್ದು ಮಾಹಿತಿ ಸಂಗ್ರಹಿಸಲಿದ್ದಾರೆ.
ರಾಜ್ಯ ಪೊಲೀಸ್ ಮುಖ್ಯಸ್ಥ ಪ್ರವೀಣ್ ಸೂದ್ ಅವರು ಕೂಡ ಭೇಟಿ ನೀಡಲಿದ್ದಾರೆ. ನಾಳೆ ಕರಾವಳಿಯಲ್ಲಿ ಪ್ರಮುಖ ಅಧಿಕಾರಿಗಳ ಜತೆ ಗೃಹಸಚಿವರು ಸಭೆ ನಡೆಸಲಿದ್ದಾರೆ. ಅಲ್ಲದೆ, ಆಸ್ಪತ್ರೆಗೆ ತೆರಳಿ ರಿಕ್ಷಾ ಚಾಲಕ ಪುರುಷೋತ್ತಮ ಭೇಟಿ ನೀಡಿ ಆರೋಗ್ಯ ವಿಚಾರಿಸಲಿದ್ದಾರೆ ಎಂದು ತಿಳಿದುಬಂದಿದೆ.