ಮಂಗಳೂರು, ನ 23 (DaijiworldNews/MS): ನಗರದ ನಾಗುರಿಯ ಕಂಕನಾಡಿ ಪೊಲೀಸ್ ಠಾಣೆ ಬಳಿ ಕಳೆದ ಶನಿವಾರ ಆಟೋದಲ್ಲಿ ಸಂಭವಿಸಿದ ಕುಕ್ಕರ್ ಬಾಂಬ್ ಸ್ಫೋಟದಲ್ಲಿ ತೀವ್ರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಆಟೋರಿಕ್ಷಾ ಚಾಲಕ ಪುರುಷೋತ್ತಮ ಪೂಜಾರಿಯವರನ್ನು ಸಚಿವ ಆರಗ ಜ್ಞಾನೇಂದ್ರ ಇಂದು ಭೇಟಿಯಾಗಿ ಆರೋಗ್ಯ ವಿಚಾರಿಸಿದರು.
ಈ ವೇಳೆ ಗೃಹ ಸಚಿವರು ವೈಯಕ್ತಿಕವಾಗಿ 50 ಸಾವಿರ ರೂ. ಧನಸಹಾಯ ನೀಡಿದರು. ಅಲ್ಲದೇ ಚಿಕಿತ್ಸೆಯ ವೆಚ್ಚವನ್ನು ಸರ್ಕಾರದಿಂದಲೇ ಭರಿಸಲಾಗುವುದು ಎಂದು ಭರವಸೆ ನೀಡಿದರು
ಇದಕ್ಕೂ ಮೊದಲು ಅವರು ಸ್ಫೋಟ ಸಂಭವಿಸಿದ ಸ್ಥಳಕ್ಕೆ ಭೇಟಿ ನೀಡಿ ಆಟೋ ರಿಕ್ಷಾವನ್ನು ಪರಿಶೀಲಿಸಿ, ಘಟನೆಯ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು.ಈ ವೇಳೆ ಶಾಸಕ ಭರತ್ ಶೆಟ್ಟಿ, ರಾಜ್ಯ ಪೊಲೀಸ್ ಮಹಾನಿರ್ದೇಶಕ ಮತ್ತು ಐಜಿಪಿ ಪ್ರವೀಣ್ ಸೂದ್, ದ.ಕ. ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್., ಐಜಿಪಿ ಚಂದ್ರಗುಪ್ತ, ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್, ಡಿಸಿಪಿ ಅಂಶು ಕುಮಾರ್ ಹಾಗೂ ಇತರ ಪೊಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.