ಮಂಗಳೂರು, ಫೆ 27 (MSP): ಪಾಕಿಸ್ತಾನದ ಬಾಲಾಕೋಟ್ ನಲ್ಲಿರುವ ಉಗ್ರರ ನೆಲೆಗಳ ಮೇಲೆ ಭಾರತೀಯ ಸೇನೆ ವೈಮಾನಿಕ ದಾಳಿ ನಡೆಸಿರುವ ಹಿನ್ನಲೆಯಲ್ಲಿ ನಗರದೆಲ್ಲೆಡೆ ಕಟ್ಟೆಚ್ಚರ ವಹಿಸಲಾಗಿದ್ದು, ಬಿಗು ಪೊಲೀಸ್ ಬಂದೋಬಸ್ತ್ ಕೂಡಾ ಕೈಗೊಳ್ಳಲಾಗಿದೆ. ಮಂಗಳೂರು ನಗರ ಕಮಿಷನರೆಟ್ ಹಾಗೂ ಉಡುಪಿ ಜಿಲ್ಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸ್ ಗಸ್ತು ನಿಯೋಜಿಸಲಾಗಿದೆ.
ನಗರ ಪೊಲೀಸ್ ಕಮಿಷನರ್ ಸಂದೀಪ್ ಪಾಟೀಲ್ ನಿರ್ದೇಶನದಂತೆ ಡಿಸಿಪಿಗಳಾದ ಹನುಮಂತರಾಯ , ಉಮಾಪ್ರಶಾಂತ್, ಎಸಿಪಿ ಇನ್ ಸ್ಪೆಕ್ರ್ ಗಳ ತಂಡ ನಗರದಲ್ಲಿ ಗಸ್ತು ತಿರುಗಿದರು. ತಡರಾತ್ರಿವರೆಗೂ ನಗರದಲ್ಲಿ ಪೊಲೀಸರು ಬಿಗುಬಂದೋಬಸ್ತ್ ನಡೆಸಿದರು.
ಕರಾವಳಿಯಲ್ಲಿ ಭದ್ರತೆಗೆ 2 ಕೆಎಸ್ಆರ್’ಪಿ, 8 ಸಿಆರ್ ತುಕಡಿ ಯನ್ನು ಭದ್ರತೆಗೆ ನಿಯೋಜಿಸಲಾಗಿದೆ. ವಿಮಾನ ನಿಲ್ದಾಣ, ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ , ರೈಲ್ವೆ ನಿಲ್ದಾಣ, ಬಂದರು ಪ್ರದೇಶಗಳಲ್ಲಿ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಿ ಕಟ್ಟೆಚ್ಚರ ವಹಿಸಲಾಗಿದೆ. ಬಂದರು, ಸಮುದ್ರ ವ್ಯಾಪ್ತಿಯಲ್ಲಿ ಕರಾವಳಿ ಕಾವಲು ಪೊಲೀಸರು ಅಲರ್ಟ್ ಆಗಿದ್ದಾರೆ
ನಗರ ವ್ಯಾಪ್ತಿಯಲ್ಲಿ ಯಾವುದೇ ಅಹಿತಕರ ಘಟನೆ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸಿ ಪೊಲೀಸ್ ಗಸ್ತು ನಿಯೋಜಿಸಲಾಗಿದೆ.