ಮಣಿಪಾಲ, ಡಿ 02 (daijiworldNews/HR): ಸುರತ್ಕಲ್ನಲ್ಲಿದ್ದ ಟೋಲ್ ಅನ್ನು ಹೆಜಮಾಡಿ ಟೋಲ್ನೊಂದಿಗೆ ವಿಲೀನಗೊಳಿಸಲಾಗಿದ್ದು, ಪರಿಷ್ಕೃತ ದರ ಪಡೆಯುವ ದಿನಾಂಕ ಇನ್ನೂ ನಿರ್ಧಾರವಾಗಿಲ್ಲ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಕೋರಿಕೆಯಂತೆ ಹೆಜಮಾಡಿ ಗೇಟ್ಗೆ ಸೂಕ್ತ ಭದ್ರತೆ ಕಲ್ಪಿಸಲಿದ್ದೇವೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ತಿಳಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಅವರು, ಟೋಲ್ ದರ ಹೆಚ್ಚಳಕ್ಕೆ ಜನಪ್ರತಿನಿಧಿ ಗಳು ಆಕ್ಷೇಪ ವ್ಯಕ್ತಪಡಿಸಿದ್ದು, ಶೀಘ್ರದಲ್ಲಿಯೇ ಅವರ ಸಭೆ ಕರೆಯಲಾಗುತ್ತದೆ. ಸಾರ್ವಜನಿಕರು ಅಥವಾ ಯಾವುದೇ ಸಂಘಟನೆಗಳಿಂದ ಈ ಸಂಬಂಧ ದೂರು ಅಥವಾ ಆಕ್ಷೇಪಣೆಗಳು ಬಂದಿಲ್ಲ. ಬಂದಲ್ಲಿ ಪರಿಶೀಲಿಸಲಾಗುವುದು. ಪರಿಷ್ಕೃತ ದರ ಸಂಗ್ರಹ ಆರಂಭಿ ಸುವ ಮೊದಲು ಹೆದ್ದಾರಿ ಪ್ರಾಧಿಕಾರವು ಸ್ಥಳೀಯವಾಗಿಯೂ ಜಿಲ್ಲಾಡಳಿತಕ್ಕೂ ಮಾಹಿತಿ ನೀಡಲಿದೆ ಎಂದರು.
ಇನ್ನು ಟೋಲ್ಗೇಟ್ ವಿರೋಧಿ ಸಮಿತಿಯು ಪ್ರತಿಭಟನೆಗೆ ಕರೆ ನೀಡಿರುವ ಮಾಹಿತಿ ಬಂದಿದ್ದು, ಪ್ರಜಾಸತ್ತಾತ್ಮಕ ಪ್ರತಿಭಟನೆಗೆ ಯಾವುದೇ ಸಮಸ್ಯೆಯಿಲ್ಲ. ಹೆದ್ದಾರಿ ಬಂದ್, ಆಸ್ತಿಪಾಸ್ತಿ ಹಾನಿ ಇತ್ಯಾದಿ ಮಾಡಿದರೆ ಕಾನೂನು ಕ್ರಮ ತೆಗೆದುಕೊಳ್ಳಲಿದ್ದೇವೆ. ಕಾಪು ಠಾಣೆ ವ್ಯಾಪ್ತಿಯಲ್ಲಿ ಈಗಾಗಲೇ ಸಭೆ ನಡೆಸಿ ಅಗತ್ಯ ಸೂಚನೆ ನೀಡಿದ್ದೇವೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಕೆ ಅಕ್ಷಯ್ ಮಚ್ಚೀಂದ್ರ ತಿಳಿಸಿದ್ದಾರೆ.