ಉಡುಪಿ, ಡಿ 02 (daijiworldNews/SM): ಲಾರಿ ಮತ್ತು ಬೈಕ್ ನಡುವೆ ಉಂಟಾದ ಭೀಕರ ಅಪಘಾತವೊಂದರಲ್ಲಿ ಬೈಕ್ ನಲ್ಲಿದ್ದ ಸಹಸವಾರ ಗಂಭೀರ ಗಾಯಗೊಂಡು ಮೃತಪಟ್ಟ ಘಟನೆ ಉಡುಪಿ ಕಟಪಾಡಿಯ ಜಂಕ್ಷನ್ ನಲ್ಲಿ ನಡೆದಿದೆ.
ಭೀಕರ ಅಫಘಾತದಲ್ಲಿ ಬೈಕ್ ಸಹಸವಾರ ದಾರುಣವಾಗಿ ಮೃತಪಟ್ಟು, ಸವಾರ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಉಡುಪಿ ಕಟಪಾಡಿಯ ಜಂಕ್ಷನ್ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ. ಮೃತರನ್ನು ಉದ್ಯಾವರ ಬೊಳ್ಜೆಯ ನಿವಾಸಿ ಸುಶಿಕ್ಷಿತ್ (20) ಎಂದು ಗುರುತಿಸಲಾಗಿದೆ. ಅಫಘಾತದಿಂದ ಗಾಯಗೊಂಡ ಬೈಕ್ ಸವಾರ ಜಯದೀಪ್ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೃತ ಸುಶಿಕ್ಷಿತ್ ಅವರು ತನ್ನ ಗೆಳೆಯ ಜಯದೀಪ್ ಜೊತೆಗೆ ಕೆಟರೀಂಗ್ ಕೆಲಸಕ್ಕಾಗಿ ಬೈಕಿನಲ್ಲಿ ಹೋಗುತ್ತಿದ್ದ ವೇಳೆ ಲಾರಿಗೆ ಡಿಕ್ಕಿ ಹೊಡೆದಿದೆ. ಇದರಿಂದ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡ ಸುಶಿಕ್ಷಿತ್ ಅವರನ್ನು ಆಸ್ಪತ್ರೆಗೆ ದಾರಿ ಮಧ್ಯೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.