ಮಂಗಳೂರು,ಡಿ 03(DaijiworldNews/MS): ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ವತಿಯಿಂದ ಜಿಲ್ಲಾ ಮಟ್ಟದ ಗ್ರಾಮ ನೈರ್ಮಲ್ಯ ಹಾಗೂ ಶುಚಿತ್ವ ಕಾಪಾಡುವ ದೃಷ್ಟಿಯಿಂದ ಶಾಲೆ, ಕಾಲೇಜು ಮತ್ತು ವಿವಿಧ ಸಂಘ ಸಂಸ್ಥೆಗಳು ಹಾಗೂ ಸಾರ್ವಜನಿಕ ಭಾಗಿತ್ವದಲ್ಲಿ ಬಂಟ್ವಾಳ ತಾಲೂಕಿನ ಪುದು ಗ್ರಾಮ ಪಂಚಾಯತಿ ಸಹಕಾರ ದಲ್ಲಿ ಡಿ.3ರ ಶನಿವಾರ ಜಿಲ್ಲಾ ಮಟ್ಟದ ಸ್ವಚ್ಛ ಶನಿವಾರ ಅಭಿಯಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಶಾಸಕರಾದ ಯು.ಟಿ. ಖಾದರ್ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ. ಕುಮಾರ್, ಗ್ರಾಮ ಪಂಚಾಯತ್ ಅಧ್ಯಕ್ಷರಾದ ರಮ್ಲಾನ್ ಮಾರಿಪಳ್ಳ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹರೀಶ್ ಕೆ.ಎ., ಸಿಬ್ಬಂದಿಗಳು, ವಿವಿಧ ಸಂಘಟನೆಗಳು, ಶಾಲಾ ಕಾಲೇಜು ಮಕ್ಕಳು, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತರು ಭಾಗವಹಿಸಿದ್ದರು.
ಈ ಸಂದರ್ಭದಲ್ಲಿ ಈ ಸ್ವಚ್ಛತೆ ಕುರಿತ ಕರಪತ್ರಗಳ ಬಿಡುಗಡೆ, ಸ್ವಚ್ಚ ವಾಹಿನಿಗೆ ಚಾಲನೆ, ಸ್ವಚ್ಚತಾ ಸ್ಲೋಗನ್ ನ ಮಾರ್ಗಬದಿ ಬೋರ್ಡ್ ಗಳ ಅನಾವರಣಗೊಳಿಸಿ ನಂತರ ರಸ್ತೆ ಬದಿಯ ಕಸವನ್ನು ಹೆಕ್ಕಿ ಸ್ವಚ್ಛಗೊಳಿಸಲಾಯಿತು.