ಕಾರ್ಕಳ, ಡಿ 03(DaijiworldNews//DB): ವ್ಯಕ್ತಿಯೊಬ್ಬರು ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಾಳ ಗ್ರಾಮದ ಮಲ್ಲಾರಿನಲ್ಲಿ ನಡೆದಿದೆ.
ಕೃಷ್ಣ ಶೆಟ್ಟಿ (65) ಆತ್ಮಹತ್ಯೆ ಮಾಡಿಕೊಂಡವರು. ಡಿಸೆಂಬರ್ 2ರಂದು ತಮ್ಮ ಮನೆಯ ಪಕ್ಕದಲ್ಲಿರುವ ಹಳೆಯ ಮನೆಯಲ್ಲಿ ವಿಷ ಪದಾರ್ಥ ಸೇವಿಸಿ ಅವರು ಅಸ್ವಸ್ಥಗೊಂಡಿದ್ದರು. ಕೂಡಲೇ ಚಿಕಿತ್ಸೆಗಾಗಿ ಕಾರ್ಕಳದ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಅಲ್ಲಿ ಚಿಕಿತ್ಸೆ ನೀಡಿದ ಬಳಿಕ ಅಲ್ಲಿನ ವೈದ್ಯರ ಸಲಹೆಯಂತೆ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ದಾರಿ ಮಧ್ಯೆ ಅವರು ಮೃತಪಟ್ಟಿದ್ದಾರೆ.
ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಯಾವುದೇ ಸಮಸ್ಯೆಗೆ ಆತ್ಮಹತ್ಯೆ ಪರಿಹಾರವಲ್ಲ. ನೀವು ಯಾವುದೇ ತೊಂದರೆಯಲ್ಲಿದ್ದರೆ ದಯವಿಟ್ಟು ಮಾನಸಿಕ ಆರೋಗ್ಯ ತಜ್ಞರ ಸಹಾಯ ಪಡೆಯಿರಿ. ಸಹಾಯವಾಣಿ ಸಂಖ್ಯೆ - 9152987821