ಸುಳ್ಯ, ಡಿ 04 (DaijiworldNews/HR): ಬೀರಮಂಗಲದ ಬಾಡಿಗೆ ಮನೆಯೊಂದರಲ್ಲಿ ಪತ್ನಿಯನ್ನು ಕೊಲೆಗೈದು ಆಕೆಯ ದೇಹವನ್ನು ಗೋಣಿ ಚೀಲದಲ್ಲಿ ಬಚ್ಚಿಟ್ಟಿದ್ದ ಪಶ್ಚಿಮ ಬಂಗಾಳ ಮೂಲದ ಇಮ್ರಾನ್ ಶೇಖ್ಗೆ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.
ಸುಬ್ರಹ್ಮಣ್ಯ ಪೊಲೀಸರು ಪಶ್ಚಿಮ ಬಂಗಾಳಕ್ಕೆ ತೆರಳಿ ಆರೋಪಿಯನ್ನು ಊರಿಗೆ ಕರೆತಂದಿದ್ದರು. ನಂತರ ವಿಚಾರಣೆ ವೇಳೆ ಆರೋಪಿ ತಾನು ಕೊಲೆಯಾದ ರಾತ್ರಿ ಬೆಂಗಳೂರಿಗೆ ಹೋಗಿ ನಂತರ ರೈಲಿನಲ್ಲಿ ಪಶ್ಚಿಮ ಬಂಗಾಳಕ್ಕೆ ತೆರಳಿದ್ದಾಗಿ ತಪ್ಪೊಪ್ಪಿಕೊಂಡಿದ್ದಾನೆ.
ಪೊಲೀಸರು ಆರೋಪಿಯನ್ನು ಡಿಸೆಂಬರ್ 1 ರಂದು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಡಿಸೆಂಬರ್ 14 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.